ಬಳ್ಳಾರಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಅಭಿಯೋಜಕರ ಇಲಾಖೆ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಪ್ರಯುಕ್ತ ಕಾನೂನು ಸಾಕ್ಷರತಾ ಕಾರ್ಯಕ್ರಮ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ ಗುರುವಾರ ಜರುಗಿತು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ಬಿರಾದಾರ ಅವರು ಉದ್ಘಾಟಿಸಿ ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ಧೇಶಗಳು ಮತ್ತು ಅವುಗಳ ಸದುಪಯೋಗದ ಬಗ್ಗೆ ತಿಳಿಸಿದರು.
ಅರ್ಥಿಕವಾಗಿ ಸಬಲರಾಗಿರದವರಿಗೆ ಅವರ ಪ್ರಕರಣಗಳ ನಡೆಸುವ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತ ಕಾನೂನು ನೆರವು ಒದಗಿಸಲಾಗುವುದು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಬಿ.ಹಂದ್ರಾಳ್ ಅವರು ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿವರಿಸಿದರು.ವಕೀಲರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಂ.ಅಂಕಲಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ನ್ಯಾಯಾಧೀಶರಾದ ಖಾಸೀಂ ಚೂರಿಖಾನ್, ವಿಪುಲ ಎಂ.ಬಿ.ಪೂಜಾರ, ಅಭಿಯೋಜನಾ ಇಲಾಖೆಯ ಸಾರ್ವಜನಿಕ ಅಭಿಯೋಜಕರಾದ ಅಂಜಲಿ, ವಕೀಲರ ಸಂಘದ ಕಾರ್ಯದರ್ಶಿ ಎಸ್.ವಿ.ಅರಸೂರ ಸೇರಿದಂತೆ ವಕೀಲರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ