ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ

ಬೆಂಗಳೂರು

        ನಗರದ ಬೀದಿ ವ್ಯಾಪಾರಗಳಿಗೆ ಗುರುತಿನ ಚೀಟಿ ನೀಡಲಾಗುತ್ತಿದ್ದು ಇನ್ನು ಮುಂದೆ ಯಾರಾದರೂ ಕಿರುಕುಳ ನೀಡುವುದಾಗಲಿ ಹಣ ವಸೂಲಿ ಮಾಡಿದರೆ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ಅಹಾರ ಮತ್ತು ನಾಗರೀಕ ಸರಬರಾಜು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಗುರುತಿನ ಚೀಟಿ ಪಡೆದ ವ್ಯಾಪಾರಿಗಳು ನೆಮ್ಮದಿ ಬದುಕು ಸಾಗಿಸಬೇಕು.ಯಾರಿಗೆ ಹೆದರಬೇಡಿ, ಒಂದು ವೇಳೆ ಯಾರಾದರೂ ಹಣ ವಸೂಲಿ ಮಾಡಲು ಮುಂದಾದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲು ಸಾಧ್ಯವಾಗದಿದ್ದರೆ ನೇರವಾಗಿ ನನಗೆ ದೂರು ನೀಡಿ ಎಂದು ಹೇಳಿದರು.

        ನಗರದಲ್ಲಿಂದು ಚಾಮರಾಜಪೇಟೆಯಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ, ಬಿಬಿಎಂಪಿ ಸಹಯೋಗದೊಂದಿಗೆ ಆಯೋಜಿಸಿದ್ದ, ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕೆಆರ್ ಮಾರ್ಕೆಟ್‍ನ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಪತ್ರ ನೀಡಿ ಮಾತನಾಡಿದರು.

ಬೀದಿ ವ್ಯಾಪಾರಿಗಳ ಗುರುತು

        ಬೀದಿ ವ್ಯಾಪಾರಿಗಳಿಗೆ ಪೊಲೀಸರು, ಪಾಲಿಕೆ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಬಿಬಿಎಂಪಿ, ಬೀದಿ ಬದಿ ವ್ಯಾಪಾರಿಗಳಿಗೆ ಅಧಿಕೃತ ಗುರುತಿನ ಚೀಟಿ ನೀಡಲು ನಿರ್ಧರಿಸಿತ್ತು. ಇದಕ್ಕಾಗಿ ಪಾಲಿಕೆಯ ಎಲ್ಲಾ ಎಂಟು ವಲಯಗಳಲ್ಲಿ ಕೆಲ ತಿಂಗಳಿಂದ ಸಮೀಕ್ಷೆ ನಡೆಸಿ 24,629 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿದೆ ಎಂದು ಹೇಳಿದರು.

        ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಮಾತನಾಡಿ, ಕಲಾಸಿಪಾಳ್ಯ ವ್ಯಾಪ್ತಿಯ 1,600 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲಾಗಿದೆ.ಒಂದು ರಸ್ತೆ, ಗಲ್ಲಿ, ಪಾದಚಾರಿ ಮಾರ್ಗ, ಬೀದಿ ಬದಿ, ಸಾರ್ವಜನಿಕ ಉದ್ಯಾನ, ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಂಚರಿಸುತ್ತಾ ವ್ಯಾಪಾರ ಮಾಡುವವರನ್ನು ಬೀದಿ ವ್ಯಾಪಾರಿಗಳು ಎಂದು ಪರಿಗಣಿಸಲಾಗಿದೆ ಎಂದರು.

        ಪ್ರಮುಖವಾಗಿ ಗುರುತಿನ ಚೀಟಿ ಹೊಂದಿರುವ ವ್ಯಾಪಾರಿಗಳಿಗೆ ಅಧಿಕಾರಿಗಳಿಂದ ದೌರ್ಜನ್ಯ ನಡೆಯುವುದಿಲ್ಲ. ಎಲ್ಲಿ ಬೇಕಾದರೂ ವ್ಯಾಪಾರ ಮಾಡಿಕೊಳ್ಳಬಹುದಾಗಿದೆ. ಅಲ್ಲದೆ ಸಣ್ಣ ಸೌಲಭ್ಯಗಳು ಲಭ್ಯವಾಗಲಿದ್ದು ವ್ಯಾಪಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸರ್ವೇ ಕಾರ್ಯ

         ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ 1.5 ಅಲಕ್ಷಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಪಾಲಿಕೆ ಅಧಿಕಾರಿಗಳು ಮಾತ್ರ ಕೇವಲ 24,629 ಬೀದಿ ಬದಿ ವ್ಯಾಪಾರಿಗಳ ಸರ್ವೆ ಮಾಡಿ ಪಟ್ಟಿ ತಯಾರಿಸಿದ್ದಾರೆ. ಸರ್ವೇ ಕಾರ್ಯ ಪೂರ್ಣಗೊಂಡಿದೆ ಎಂದು ಹೇಳುವುದು ಬೇಡ ಹಂತ ಹಂತವಾಗಿ ಸರ್ವೇ ಕಾರ್ಯ ಮುಂದುವರೆಸಿ ಎಲ್ಲ ವ್ಯಾಪಾರಿಗಳಿಗೂ ಗುರುತಿನ ಚೀಟಿ ನೀಡಬೇಕು ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಮುಖಂಡರೊಬ್ಬರು ಆಗ್ರಹಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link