ಅಯ್ಯಪ್ಪಸ್ವಾಮಿ ಭಕ್ತರ ಮೇಲಿನ ದೌರ್ಜನ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು

        ಅಯ್ಯಪ್ಪಸ್ವಾಮಿ ಭಕ್ತರ ಮೇಲೆ ಕೇರಳ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಬಿಜೆಪಿ ಮುಖಂಡರು ಕಾರ್ಯಕರ್ತರು ಶಬರಿಮಲೆ ಸಂರಕ್ಷಣಾ ಸಮಿತಿಯ ಸದಸ್ಯರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

        ಮೌರ್ಯ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು ಸೇರಿದಂತೆ ನೆರೆದಿದ್ದ ಶಬರಿಮಲೆ ಸಂರಕ್ಷಣಾ ಸಮಿತಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರನ್ನು ಉದ್ದೇಶಿಸಿ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ದೇವಸ್ಥಾನದಲ್ಲಿರಬೇಕಾದ ಅಯ್ಯಪ್ಪಸ್ವಾಮಿ ಭಕ್ತರು ಕೇರಳ ಸರ್ಕಾರದ ಭಕ್ತರ ವಿರೋಧಿ ನೀತಿಯಿಂದ ಜೈಲಿನಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

         ಪೆÇಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಬೇಕಾದ ಪೆÇಲೀಸರು ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿದ್ದಾರೆ ಎಂದು ಕೇರಳ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ಸಂಬಂಧ ಸುಪ್ರೀಂ ಕೋರ್ಟ್‍ನಲ್ಲಿ ನಡೆಯುತ್ತಿದ್ದ ವಿಚಾರಣೆ ವೇಳೆ ಮೌನ ವಹಿಸಿದ್ದ ಕೇರಳ ಸರ್ಕಾರ ಭಕ್ತರಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತಮ್ಮ ಅಭಿಪ್ರಾಯವನ್ನು ಮಂಡಿಸಬೇಕಿತ್ತು ಎಂದರು,

        ಕೇರಳ ಸರ್ಕಾರದ ಈ ಕ್ರಮದಿಂದ ಲಕ್ಷಾಂತರ ಅಯ್ಯಪ್ಪಸ್ವಾಮಿ ಭಕ್ತರು ಊಟ, ನಿದ್ರೆ ಆಸರೆಯಿಲ್ಲದೆ ಬೀದಿಯಲ್ಲಿ ಬಿದ್ದಿದ್ದಾರೆ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಕೋಟ್ಯಾಂತರ ರೂ. ಆದಾಯ ಪಡೆಯುವ ಕೇರಳ ಸರ್ಕಾರ ಭಕ್ತರಿಗೆ ದೇವಸ್ಥಾನದಲ್ಲಿ ಕನಿಷ್ಠ ಸೌಲಭ್ಯವನ್ನು ನೀಡಿಲ್ಲ ಎಂದು ಆರೋಪಿಸಿದರು.

        ಕಳೆದ ಒಂದು ತಿಂಗಳಿನಿಂದ ಕೇರಳದಲ್ಲಿ ಆತಂಕ ಹಾಗೂ ಭಯ ಮಿಶ್ರಿತ ವಾತಾವರಣೆ ನಿರ್ಮಾಣವಾಗಿದೆ. ಆದರೂ ಕೇರಳ ಸರ್ಕಾರ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಸುಪ್ರೀಂಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತಿಲ್ಲ ಎಂದರು ದೂರಿದರು.

        ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಸುಪ್ರೀಂ ಕೋರ್ಟ್ ಆದೇಶ ಅನುಷ್ಠಾನಕ್ಕೆ ಕೇರಳ ಸರ್ಕಾರ ಮುಂದಾಗಿದೆ. ಆದರೆ ಸರ್ಕಾರದ ಈ ಕ್ರಮಕ್ಕೆ ಇಡೀ ಕೇರಳ ವಿರೋಧ ವ್ಯಕ್ತ ಪಡಿಸುತ್ತಿದೆ ಎಂದು ಹೇಳಿದರು.

       ಮಸೀದಿಗಳಲ್ಲಿ ಮಹಿಳೆಯರಿಗೆ ಅವಕಾಶ ಕೊಡಿ. ಮುಸ್ಲಿಂ ಸಂಪ್ರದಾಯದಲ್ಲಿ ಮಹಿಳೆಯರಿಗೆ ಮಸೀದಿಗೆ ಪ್ರವೇಶಾವಕಾಶ ಇಲ್ಲದಿರುವುದನ್ನು ಗೌರವಿಸುತ್ತೇವೆ. ಹಿಂದು ಧರ್ಮ ಸಂಪ್ರದಾಯ ವಿಭಜನೆಗೆ ಈ ಕುತಂತ್ರ ಮಾಡಲಾಗುತ್ತಿದೆ ಹಿಂದು ಸಂಪ್ರದಾಯ ಮುರಿದು ಹಾಕಲು ಕೇರಳ ಸರ್ಕಾರ ನಡೆಸುತ್ತಿರುವ ಹುನ್ನಾರವನ್ನು ನಾವು ಸಂಪೂರ್ಣವಾಗಿ ವಿರೋಧಿಸುವುದಾಗಿ ಅವರು ತಿಳಿಸಿದರು.

        ಪ್ರತಿಭಟನೆಯಲ್ಲಿ ಸಂಸದ ಬಿ.ಸಿ. ಮೋಹನ್, ಶಾಸಕ ಅಶ್ವಥ್ ನಾರಾಯಣ್, ಎಂಎಲ್‍ಸಿ ರವಿಕುಮಾರ್, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಮಾಜಿ ಮೇಯರ್ ಕೆ.ಎಸ್. ನಟರಾಜ್, ಬೆಂಗಳೂರು ಬಿಜೆಪಿ ಅಧ್ಯಕ್ಷ ಸದಾಶಿವ್, ಶಾರದಾಪೂರ್ಣ ನಾಯಕ್ ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link