ಬೆಂಗಳೂರು
ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ರೈತರ ಸಾಲಮನ್ನಾ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪದೇ ಪದೇ ಹೇಳುತ್ತಿದ್ದಾರೆ. ಸಾಲಮನ್ನಾ ಮಾಡಿರುವುದೇ ನಿಜವಾದರೆ ಇದುವರೆಗೂ ಎಷ್ಟು ಸಾಲ ಮನ್ನಾ ಮಾಡಲಾಗಿದೆ ಎಂಬುದನ್ನು ಜನತೆಗೆ ತಿಳಿಸಬೇಕು. ವಾಸ್ತವವಾಗಿ ರೈತರು ಬ್ಯಾಂಕುಗಳಿಂದ ಪಡೆದ ಸಾಲಮನ್ನಾ ಪೈಕಿ 1 ರೂಪಾಯಿ ಮನ್ನಾ ಆಗಿಲ್ಲ, ಸಹಕಾರಿ ಕ್ಷೇತ್ರದ ಬ್ಯಾಂಕುಗಳು ದಿವಾಳಿಯಾಗಿವೆ, ರಾಷ್ಟ್ರೀಕೃತ ಬ್ಯಾಂಕುಗಳಿಂದ ರೈತರು ಪಡೆದ ಸಾಲ ಹಿಂತಿರುಗಿಸುವಂತೆ ರೈತರಿಗೆ ನೋಟೀಸ್ ನೀಡಲಾಗುತ್ತಿದೆ ಎಂದು ಹೇಳಿದರು.
ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿರುವ ವಿಧನಮಂಡಲದ ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮಾಡುವ ಸಂಬಂಧ ಕಾರ್ಯತಂತ್ರ ರೂಪಿಸಲು ಪಕ್ಷದ ಕೋರ್ ಕಮಿಟಿ ಸಭೆ ಇಂದು ಸಂಜೆ ನಡೆಯಲಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ