ಬೆಂಗಳೂರು
ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಬಾಲಿವುಡ್ ಜೋಡಿ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಇಂದು ಬೆಂಗಳೂರಿಗೆ ಆಗಮಿಸಿದರು.ಮುಂಬೈನಿಂದ ಇಲ್ಲಿಯ ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕರ್ನಾಟಕದ ಅಳಿಯನಿಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯಿತು.ಮೊನ್ನೆಯಷ್ಟೆ ಇಟಲಿಯಲ್ಲಿ ಹಸೆಮಣೆ ಏರಿದ ದೀಪ್‍ವೀರ್ ಜೋಡಿ ಕಳೆದೆರಡು ದಿನಗಳ ಹಿಂದೆ ಮುಂಬೈಗೆ ಆಗಮಿತ್ತು. ನಾಳೆ ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಬಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








