ವಿಜೃಂಭಣೆಯಿಂದ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತ್ಯೋತ್ಸವ ಆಚರಣೆಗೆ ನಿರ್ಧಾರ

ಬಳ್ಳಾರಿ

        ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತ್ಯೋತ್ಸವವನ್ನು ಇದೇ ನವೆಂಬರ್ 26ರಂದು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಸಹಾಯಕ ಆಯುಕ್ತರಾದ ರಮೇಶ ಕೋನರೆಡ್ಡಿ ಅವರು ಹೇಳಿದರು.

       ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

       ನ.26 ರಂದು ಬೆಳಗ್ಗೆ 9.30ಕ್ಕೆ ನಗರದ ಅಗ್ನಿಶಾಮಕ ಠಾಣೆಯ ಹತ್ತಿರವಿರುವ ಶ್ರೀ ಕನಕದಾಸರ ಪುತ್ಥಳಿಗೆ ಮಾರ್ಲಾಪಣೆ ಹಾಗೂ ಪೂಜೆ ಸಲ್ಲಿಸಲಾಗುವುದು. ಜಯಂತ್ಯುತ್ಸವ ನಿಮಿತ್ತ ಮೆರವಣೆಗೆ ಕಾರ್ಯಕ್ರಮವನ್ನು ದುರ್ಗಮ್ಮ ದೇವಸ್ಥಾನ, ಗಡಗಿಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‍ಪೇಟೆ ಪೊಲೀಸ್ ಠಾಣೆ, ತೇರುಬೀದಿ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಲಿದೆ.

       ನಂತರ 12.30ಕ್ಕೆ ವೇದಿಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಲಿಂಗದಹಳ್ಳಿ ಹಾಲಪ್ಪನವರು ಕನಕದಾಸರ ಮತ್ತು ಅವರ ಆದರ್ಶ ತತ್ವಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನ ನಡೆಯಲಿದ್ದು, ಸಮುದಾಯಕ್ಕೆ ಸರ್ಕಾರದ ಯೋಜನೆಗಳ ಕುರಿತು ಸಂಬಂಧಪಟ್ಟ ಇಲಾಖೆಯು ಕರಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಹೇಳಿದ ಅವರು ದೊಡ್ಡ ಬಸವಗವಾಯಿ ಮತ್ತು ಕವಿತಾ ವಸಂತ ಕುಮಾರ್ ಅವರಿಂದ ಶ್ರೀ ಕನಕದಾಸರ ಕೀರ್ತನೆಗಳ ಸಂಗೀತ ಕಾರ್ಯಕ್ರಮ ನಡೆಯಲಿದೆ.

         ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ತಾಷಾರಾಂ ಡೋಳು, ಮುಂತಾದ ಜಾನಪದ ಕಲಾತಂಡಗಳ ವ್ಯವಸ್ಥೆ ಮಾಡಲಾಗುತ್ತದೆ. ಪುತ್ಥಳಿಯ ಸುತ್ತಮುತ್ತ ಹಾಗೂ ವೇದಿಕೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಮೆರವಣಿಗೆ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ ಎಂದು ಅವರು ಹೇಳಿದರು.

         ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರಪಾಲಿಕೆಯ ಪ್ರಭಾರಿ ಆಯುಕ್ತರಾದ ಮಹಮ್ಮದ್ ಮುನೀರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ್, ಪಾಲಿಕೆ ಸದಸ್ಯರು, ಜಿಲ್ಲಾಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಯ ಪದಾಧಿಕಾರಿಗಳು ಇತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link