ಬೆಂಗಳೂರು:

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಂ.ಫಾರೂಕ್ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.
75 ವರ್ಷ ವಯಸ್ಸಾಗಿದ್ದ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಅವರು ಇಂದು ಬೆಳಿಗ್ಗೆ 6 ಗಂಟೆಗೆ ನಿಧನಹೊಂದಿದರು. ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಪತ್ನಿಯನ್ನು ಅಗಲಿದ್ದಾರೆ.
ಎ.ಎಂ.ಫಾರೂಕ್ ಪಾರ್ಥಿವ ಶರೀರವನ್ನು ಹೆಬ್ಬಾಳ ಮೇಲ್ಸೇತುವೆ ಬಳಿ ಇರುವ ನ್ಯಾಯ ಗ್ರಾಮದ ಕ್ವಾರ್ಟರ್ಸ್ ನಂ.1ರಲ್ಲಿನ ಅವರ ಅಳಿಯಂದಿರ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಜಯಮಹಲ್ನಲ್ಲಿರುವ ಅಬ್ದುಲ್ ಖುದ್ದೂಸ್ ಕಬರ್‌ಸ್ತಾನದಲ್ಲಿ ಬುಧವಾರ ಸಂಜೆ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








