ದೇಶದ ಅಭಿವೃದ್ಧಿಯನ್ನು ಕಡೆಗಣಿಸಿದ ಬಿಜೆಪಿ : ದಿನೇಶ್ ಗುಂಡೂರಾವ್

ಬೆಂಗಳೂರು

         ಕಳೆದ ನಾಲ್ಕೂವರೆ ವರ್ಷದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜನರಿಗೆ ನೀಡಿದ ಭರವಸೆ ಈಡೇರಿಸದೇ ದೇಶದ ಅಭಿವೃದ್ಧಿಯನ್ನು ಕಡೆಗಣಿಸಿರುವುದರಿಂದ ಬೇಸತ್ತಿರುವ ಜನರನ್ನು ಪಕ್ಷದತ್ತ ಸೆಳೆಯಬೇಕು ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾರ್ಯಕರ್ತರಿಗೆ ಕರೆ ನೀಡಿದರು.

         ಭ್ರಷ್ಟಾಚಾರ, ಕೋಮುವಾರಿ ದಳ್ಳುರಿಯಿಂದ ಜನತೆ ಬೇಸತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಜನರು ಇಟ್ಟಿದ್ದ ವಿಶ್ವಾಸಕ್ಕೆ ಹುಸಿಯಾಗಿರುವ ಕಾರ್ಯಕರ್ತರು ಪರಿಣಾಮಕಾರಿಯಾಗಿ ಬಳಸಿಕೊಂಡು ಪಕ್ಷ ಸಂಘಟನೆ ಮಾಡಬೇಕು ಎಂದು ಹೇಳಿದರು.

        ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪಕ್ಷ ಜವಾಬ್ದಾರಿ ಹುದ್ದೆಯನ್ನು ಸಮರ್ಥವಾಗಿ ಬಳಸಿಕೊಂಡು ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ ಮುಂದಿನ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕೆಂದು ಸಲಹೆ ನೀಡಿದರು.

       ಕಾಂಗ್ರೆಸ್ ಪಕ್ಷವನ್ನು ಕೆಳಹಂತದ ಬ್ಲಾಕ್, ವಾರ್ಡ್ ಹಂತದಲ್ಲಿ ಸಂಘಟಿಸುವ ಅವಶ್ಯಕತೆ ಬಹಳವಿದೆ. ಜನರ, ಮತದಾರರ ಸಂಪರ್ಕವನ್ನು ಹೆಚ್ಚಾಗಿ ಇಟ್ಟುಕೊಂಡು ಬೇರುಮಟ್ಟದಿಂದ ಪಕ್ಷವನ್ನು ಸಂಘಟಿಸಿದರೆ ಮುಂದಿನ 2019ರಲ್ಲಿ ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

        ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಆಯ್ಕೆಯಾಗಿದ್ದೇನೆ. ಇದಕ್ಕೆ ಕಾರಣವೇನೆಂದರೆ ಕಾಂಗ್ರೆಸ್ ಪಕ್ಷದ ಜನಪ್ರಿಯ ಯೋಜನೆಗಳು ತಳಮಟ್ಟದ ಕಾರ್ಯಕರ್ತರಿಗೆ ತಲುಪದೇ ಇರುವುದು. ಹಾಗಾಗಿ ಯುಪಿಎಸ್ ಸರ್ಕಾರದ ಸಾಧನೆಗಳು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ನಿಮ್ಮದಾಗಬೇಕು ಎಂದು ತಿಳಿಸಿದರು.

        ಕಾರ್ಯಕರ್ತರೇ ಪಕ್ಷದ ಬೆನ್ನೆಲಬು ಕೇವಲ ಪದವಿಗಳಿಗೆ ಹಾತೊರೆಯದೆ ಪಕ್ಷ ನೀಡಿರುವ ಜವಾಬ್ದಾರಿ ಸ್ಥಾನಗಳನ್ನು ಅರಿತು ಪಕ್ಷದ ತತ್ವಸಿದ್ಧತಾಗಳಿಗೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

        ಪಕ್ಷದ ಏಳಿಗೆಗೆ ಶ್ರಮಿಸಿ: ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ಮಾತನಾಡಿ, ಭಾರತ ವೈವಿಧ್ಯತೆಯ ದೇಶ. ಎಲ್ಲ ಧರ್ಮೀಯರ ಹಬ್ಬಗಳ ಆಚರಣೆಗೆ ಡಾ. ಅಂಬೇಡ್ಕರ್ ಸಂವಿಧಾನ ಆದ್ಯತೆ ನೀಡಿದೆ. ಸಂವಿಧಾನ ಆಶೆಯಗಳನ್ನು ಚಾಚುತಪ್ಪದೆ ಜವಾಬ್ದಾರಿಯನ್ನು ಕಾಂಗ್ರೆಸ್ ಮಾಡುತ್ತಾ ಬಂದಿದೆ. ಜಾತ್ಯಾತೀತ ಮನೋಭಾವ ಹೊಂದಿರುವ ಕಾಂಗ್ರೆಸ್ ಮುಖಂಡರು ಸರ್ವಧರ್ಮ ಪ್ರಿಯರು. ಜವಲಾಲ್ ನೆಹರು, ಇಂದಿರಾಗಾಂಧಿ, ತಮ್ಮ ರಾಜೀವ್ ಗಾಂಧಿಯವರು ಈ ದೇಶಕ್ಕೆ ನೀಡಿರುವ ಅನೇಕ ಕೊಡುಗೆಗಳು ಸ್ಮರಣೆಯವಾದವು. ಕಾಂಗ್ರೆಸ್ ಪಕ್ಷದ ತತ್ವಸಿದ್ಧಾಂತಗಳು ಜನರಿಗೆ ತಲುಪಿಸಿ, ಕಾಂಗ್ರೆಸ್ ಪಕ್ಷದ ಏಳಿಗೆಗೆ ದುಡಿಯುವಂತೆ ನೂತನ ಅಧ್ಯಕ್ಷ ಶರವಣ ಹಾಗೂ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನಸಭಾ ಸದಸ್ಯ ರಿಜ್ವಾನ್ ಹರ್ಷದ್, ಕೆಪಿಸಿಸಿ ಪ್ರಧಾನಿ ಕಾರ್ಯದರ್ಶಿ ಸತೀಶ್ ಮಲ್ಲಣ್ಣ, ಕಾಂಗ್ರೆಸ್ ಮುಖಂಡರಾದ ಶೇಖರ್, ಸತ್ಯನಾರಾಯಣ, ಬಿ.ಪಿ. ಶ್ರೀನಿವಾಸ್, ಬಿಪಿಎಂಪಿ ಸದಸ್ಯ ಗೋವಿಂದರಾಜು, ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಸಂಪತ್, ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ಹೆಗ್ಡೆ, ಯೂತ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವಿಶ್ವನಾಥ್, ಮಹಿಳೆ ಅಧ್ಯಕ್ಷರಾದ ದೇವಿ, ರಾಜಶ್ರೀ ಇನ್ನಿತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link