ಚಿತ್ರದುರ್ಗ:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಪಂಗಡದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಪಿ.ತಿಪ್ಪೇಸ್ವಾಮಿ, ಸಂಘಟನಾ ಕಾರ್ಯದರ್ಶಿಯಾಗಿ ಜಿ.ಪಿ.ಪಾಲಯ್ಯ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷ ಹೆಚ್.ಅಂಜಿನಪ್ಪ ತಿಳಿಸಿದ್ದಾರೆ.
ನೂತನವಾಗಿ ನೇಮಕವಾಗಿರುವ ಎಂ.ಪಿ.ತಿಪ್ಪೇಸ್ವಾಮಿ ಹಾಗೂ ಜಿ.ಪಿ.ಪಾಲಯ್ಯ ಇವರುಗಳಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ನೀಡಿದ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಹೆಚ್.ಅಂಜಿನಪ್ಪ ಜಿಲ್ಲಾದ್ಯಂತ ಸಂಚರಿಸಿ ಪರಿಶಿಷ್ಟ ಪಂಗಡ ವಿಭಾಗವನ್ನು ಸಂಘಟಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವಂತೆ ಸೂಚಿಸಿದರು.
ಕೆ.ಪಿ.ಸಿ.ಸಿ.ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಬಸವರಾಜ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
