ಚಿತ್ರದುರ್ಗ:
ನಗರದ ದಾವಣಗೆರೆ ರಸ್ತೆಯಲ್ಲಿರುವ ಮಹಾವೀರ ನಗರದಲ್ಲಿ ಮಹಾವೀರನಗರ ಕ್ಷೇಮಾಭಿವೃದ್ದಿ ಸಂಘದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಲಾಯಿತು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್‍ರವರು ಕನ್ನಡಾಂಬೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡುತ್ತ ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ಧಕ್ಕೆಯಾದಾಗ ಜಾತಿ ಭೇದವಿಲ್ಲದೆ ಎಲ್ಲರೂ ಒಟ್ಟಾಗಿ ಹೋರಾಡುವ ಮೂಲಕ ಕನ್ನಡ ನಾಡಿನ ಸಂಸ್ಕøತಿಯನ್ನು ಉಳಿಸಿಕೊಳ್ಳಬೇಕಾಗಿದೆ. ಹರಿದು ಹಂಚಿಹೋಗಿದ್ದ ಕರ್ನಾಟಕವನ್ನು ಒಂದುಗೂಡಿಸುವುದಕ್ಕಾಗಿ ಅನೇಕ ಹಿರಿಯರ ತ್ಯಾಗ ಬಲಿದಾನವಿದೆ. ಅವನ್ನೆಲ್ಲಾ ನೆನಪು ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಹಾವೀರ ನಗರ ಕ್ಷೇಮಾಭಿವೃದ್ದಿ ಸಂಘದ ಮಾಜಿ ಅಧ್ಯಕ್ಷ ಎಲ್.ಆರ್.ವೆಂಕಟೇಶ್‍ಕುಮಾರ್ ಮಾತನಾಡಿ ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದ ಉದ್ಯಾನವನಗಳಲ್ಲಿ ಮೆಡಿಕೇಟ್‍ಗೆ ಜಿಮ್‍ಗಳನ್ನು ಅಳವಡಿಸಿರುವ ಕೀರ್ತಿ ಆರ್.ಕೆ.ಸರ್ದಾರ್‍ರವರಿಗೆ ಸಲ್ಲಬೇಕು. 200 ಕ್ಕೂ ಹೆಚ್ಚು ವಿವಿಧ ತಳಿಗಳ ಸಸಿಗಳನ್ನು ಉದ್ಯಾನವನಗಳಲ್ಲಿ ನೆಟ್ಟು ಪರಿಸರ ಕಾಳಜಿಯನ್ನು ಮೆರದಿದ್ದಾರೆ. ಇಂತಹವರ ಕೈಗೆ ಅಧಿಕಾರ ಸಿಕ್ಕಲ್ಲಿ ಮಾತ್ರ ಚಿತ್ರದುರ್ಗ ಅಭಿವೃದ್ದಿಯಾಗಲಿದೆ ಎಂದರು.
ನಗರಸಭೆ ಸದಸ್ಯ ವೆಂಕಟೇಶ್, ಮಹಾವೀರನಗರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಬಸವರಾಜ್‍ಅಂಗಡಿ, ಗೌರವಾಧ್ಯಕ್ಷ ರವೀಂದ್ರಪ್ಪ, ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಸುಧಾಕರ್, ಶಶಿಧರ್‍ಬಾಬು, ಸುಬ್ರಮಣಿ, ನಾಗಭೂಷಣ್, ರಾಜಶೇಖರ್, ಶರತ್, ಮಂಜುನಾಥ್, ಪ್ರತಿಭಾಜಯದೇವ್, ಗೀತ, ಶೋಭಶ್ರೀನಿವಾಸ್, ಸುಧ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ