ಬೆಂಗಳೂರು
ಬಾಲಗಂಗಾಧರನಾಥ ಶಿಕ್ಷಣ ಟ್ರಸ್ಟ್ನ ಸಂಸ್ಥಾಪನಾ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಚಾಲನೆ ನೀಡಿದರು.
ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಗಳು, ಖಾಸಗಿ ಶಾಲೆಗಳಂತೆ ಕಾರ್ಯನಿರ್ವಹಿಸಲು ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಬಾಲಗಂಗಾಧರನಾಥ ಸ್ವಾಮಿಗಳ ಅವಿರತ ಶ್ರಮದಿಂದ ರಾಜ್ಯದ ಅನೇಕ ಕಡೆ ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಡಿ.ವಿ. ಸದಾನಂದ ಗೌಡ ಮಾತನಾಡಿ, ಸಾಮಾಜಿಕ ಕ್ಷೇತ್ರ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸಿದ ಬಾಲ ಗಂಗಾಧರನಾಥ ಸ್ವಾಮಿ ಅವರ ಸೇವಾ ಕಾರ್ಯದ ಬಗ್ಗೆ ಯುವ ಪೀಳಿಗೆಗೆ ತಿಳಿಸಬೇಕಾದ ಅಗತ್ಯವಿದೆ. ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








