ಬೆಂಗಳೂರು
ಶಿಕ್ಷಣ ಕ್ಷೇತ್ರದ ಪ್ರಗತಿಗೆ ಹೆಸರಾಗಿರುವ ಕರ್ನಾಟಕದಿಂದಲೇ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ ನೀಡುವಂತಾಗಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಇಂದಿಲ್ಲಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ನಗರದ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಶಿಕ್ಷಣ ದುಬಾರಿಯಾಗಿದೆ. ಹೀಗಿರುವಾಗ ಉಚಿತ ಶಿಕ್ಷಣ ನೀಡಿದರೆ ಬಡ ಸಮುದಾಯಕ್ಕೆ ಅನುಕೂಲವಾಗುತ್ತದೆ ಎಂದರು.
ಶಿಕ್ಷಣದ ಅಭ್ಯುದಯಕ್ಕೆ ಉಪಕುಲಪತಿಗಳ ಸಮಾವೇಶ ಆದರೆ ಸಾಲದು, ಕಾಲೇಜಿನ ಪ್ರಾಂಶುಪಾಲರ ಸಮಾವೇಶಗಳು ನಡೆದು ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಯುವುದು ಸೂಕ್ತ ಎಂದರು.
ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಮಾತನಾಡಿ, ಗುಣಮಟ್ಟದ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ. ಇಂದು ಎಲ್ಲರಿಗೂ ಶಿಕ್ಷಣ ಕೊಡುವುದಕ್ಕೆ ಆಗುತ್ತಿಲ್ಲ. ಇದಕ್ಕಾಗಿ ಸೂಕ್ತ ಮಾರ್ಗೋಪಾಯಗಳನ್ನು ಸೂಚಿಸಬೇಕೆಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ