ಮಂಡ್ಯ :
ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ಅಂಬರೀಶ್ ಅಭಿಮಾನಿ ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನ ಹೊಟ್ಟೆಗೌಡನದೊಡ್ಡಿಯಲ್ಲಿ ಘಟನೆ ನಡೆದಿದ್ದು, ತಮ್ಮಯ್ಯ (51) ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ. ಅಂಬರೀಶ್ ನಿಧನಕ್ಕೆ ನೊಂದ ಅಭಿಮಾನಿ ತಮ್ಮಯ್ಯ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ಸಂಬಂದಿಸಿದಂತೆ ಮಂಡ್ಯ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.