ರಟ್ಟಿಹಳ್ಳಿ :
ತಾಲೂಕಿನ ಇಂಗಳಗೊಂದಿ ಗ್ರಾಮದಲ್ಲಿ ಮುಖ್ಯ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದು, ಕೆರೆಯಂತೆ ನೀರು ತುಂಬಿಕೊಂಡಿದೆ. ಈ ಮಾರ್ಗದಲ್ಲಿ ಹಲವಾರು ವಾಹನಗಳು ಪ್ರತಿನಿತ್ಯ ಸಂಚರಿಸುತ್ತವೆ. ಹಲವಾರು ವಾಹನ ಸವಾರರು, ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸಲು ಪರದಾಡುವಂತಾಗಿದೆ.
ಈ ರಸ್ತೆ ದುರಸ್ತಿಗಾಗಿ ಹಲವು ಬಾರಿ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಮಾಡಿದ್ದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದು, ಸಾರ್ವಜನಿಕರಿಗೆ ವಾಹನ ಸವಾರರಿಗೆ ಸಂಚರಿಸಲು ಕಷ್ಟವಾಗುತ್ತಿದೆ.ಹಲವು ಬಾರಿ ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಮುಖಂಡರಾದ ಶಿವಾನಂದ ಪೂಜಾರ ಮತ್ತು ಕರವೇ ಸದಸ್ಯರು, ಗ್ರಾಮ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
