ಬೆಂಗಳೂರು:
ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಆರೋಪಿಯನ್ನ ಕಲಬುರಗಿ ಜಿಲ್ಲೆಯ ಮಾದನ ಹಿಪ್ಪರಗಾ ಪೊಲೀಸರು ಬಂಧಿಸಿದ್ದಾರೆ.
ಮಾದನ ಹಿಪ್ಪರಗಾ ಗ್ರಾಮದ ರಾಜಕುಮಾರ ಸಾವರೆ ಬಂಧಿತ ಆರೋಪಿ.ಬಂಧಿತನಿಂದ ಒಂದು ನಾಡ ಪಿಸ್ತೂಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇನ್ನೋರ್ವ ಆರೋಪಿ ಶಾಂತಪ್ಪ ಮನೆ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಈ ಸಂಬಂಧ ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದ ಹೊಲದಲ್ಲಿ ಅಕ್ರಮ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ 5.20 ಲಕ್ಷ ರೂ. ಮೌಲ್ಯದ 105 ಕೆಜಿ ಗಾಂಜಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








