ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಯುವಕನ ಬಂಧನ…!

ಬೆಂಗಳೂರು:

       ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಯುವಕನೋರ್ವನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೆÇಲೀಸರು ಫೋಸ್ಕೋ ಕಾಯ್ದೆಯಡಿ ಬಂಧಿಸಿದ್ದಾರೆ.

       ನಗರದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಸತೀಶ್ (23) ಎಂಬಾತನನ್ನು ಬಂಧಿಸಲಾಗಿದೆ.

        ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿದ ಒಂದೂವರೆ ತಿಂಗಳಿನಿಂದ ಶಿಡ್ಲಘಟ್ಟ ತಾಲೂಕಿನ ಪಿಂಡಪಾಪಾನಹಳ್ಳಿ ಗ್ರಾಮದಲ್ಲಿ ಬಾಲಕಿಯನ್ನು ಇರಿಸಿ ಆಕೆಯ ಮೇಲೆ ಸತತವಾಗಿ ಅತ್ಯಾಚಾರ ಎಸಗಿದ್ದಾ ನೆ ಎಂದು ಆರೋಪಿಸಲಾಗಿದೆ.

       ಈ ಬಗ್ಗೆ ಬಾಲಕಿಯ ಪೋಷಕರಿಂದ ದೂರು ಪಡೆದ ನಗರ ಠಾಣೆ ಇನ್ಸ್‍ಪೆಕ್ಟರ್‍ನಾರಾಯಣಸ್ವಾಮಿ ಫೋಸ್ಕೋ ಕಾಯಿದೆಯಡಿ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link