ಬೆಂಗಳೂರು:
ಮೂವರು ಮುಸುಕುಧಾರಿಗಳು ವ್ಯಕ್ತಿವೋರ್ವನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದ ಸಂತೆ ಮೈದಾನದ ಬಳಿ ನಡೆದಿದೆ.ರಾಘವೇಂದ್ರ ಎಂಬಾತ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಈತ ಆರ್.ಎಂ.ಎಲ್ ನಗರ ನಿವಾಸಿಯಾಗಿದ್ದಾನೆ. ಇಲ್ಲಿನ ಹೋಟೆಲïನಲ್ಲಿ ಅಡುಗೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿರುವ ರಾಘವೇಂದ್ರ ಮೇಲೆ ಮುಸುಕುಧಾರಿಗಳು ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆ.
ಬಳಿಕ ತೀವ್ರವಾಗಿ ಗಾಯಗೊಂಡಿದ್ದ ರಾಘವೇಂದ್ರನನ್ನು ಮ್ಯಾಕ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಘಟನೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ಆದರೆ ರಾಘವೇಂದ್ರ ಭಜರಂಗ ದಳದ ಮುಖಂಡರೋರ್ವರ ಜೊತೆ ನಿಕಟ ಸಂಪರ್ಕ ಹೊಂದಿರುವುದಾಗಿ ತಿಳಿದುಬಂದಿದೆ.
ನಿನ್ನೆ ರಾತ್ರಿ 10 ಗಂಟೆ ಸುಮಾರು ಮೂವರು ಮುಸುಕುಧಾರಿಗಳು ಬೈಕ್ನಲ್ಲಿ ಬಂದಿದ್ದು, ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರೆಂದು ರಾಘವೇಂದ್ರ ಗುರುತಿಸಿರುವುದಾಗಿ ತಿಳಿದುಬಂದಿದೆ.ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








