ಕಾಟನ್ ಪೇಟೆ ಮುಖ್ಯ ರಸ್ತೆ ಕುಸಿತ

ಬೆಂಗಳೂರು:

         ನಗರದ ಕಾಟನ್‍ಪೇಟೆ ಮುಖ್ಯರಸ್ತೆ 8 ಅಡಿಗಳಷ್ಟು ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಳಪೆ ಕಾಮಗಾರಿ ನಡೆದಿರುವ ಹಿನ್ನೆಲೆಯಲ್ಲಿ ಈ ಮುಖ್ಯರಸ್ತೆ 8 ಅಡಿಗಳಷ್ಟು ಆಳವಾಗಿ ಕುಸಿದಿರಬಹುದು ಎನ್ನುವ ಅನುಮಾನ ವ್ಯಕ್ತವಾಗಿದೆ

          ಮುಖ್ಯರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಬಸ್ಸೊಂದು ಸಾಗಿದ ಕೆಲವೇ ಕ್ಷಣಗಳಲ್ಲಿ ರಸ್ತೆ ದಿಢೀರ್ ಎಂದು ಕುಸಿದಿದೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಸ್ತೆ ಕುಸಿಯುತ್ತಿದ್ದಂತೆ ಈ ಮಾರ್ಗದಲ್ಲಿ ಸಾಗುತ್ತಿದ್ದ ಎಲ್ಲ ಬಸ್ಸು ಮತ್ತು ಇತರ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link