ಕೆಳಗೋಟೆಯಲ್ಲಿ ಕನ್ನಡ ರಾಜ್ಯೋತ್ಸವ

ಚಿತ್ರದುರ್ಗ:

    ಸರಸ್ವತಿ ಕಾನೂನು ಕಾಲೇಜು ಮುಂಭಾಗದಲ್ಲಿರುವ ಮುನ್ಸಿಪಲ್ ಕಾಂಪ್ಲೆಕ್ಸ್‍ನ ಯುವಕರ ಬಳಗದಿಂದ ಶುಕ್ರವಾರ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

        ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ನ್ಯಾಯವಾದಿ ಫಾತ್ಯರಾಜನ್‍ರವರು ಕನ್ನಡಾಂಭೆಗೆ ಪುಷ್ಪಾರ್ಚನೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತ ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಮಾತ್ರ ಮೀಸಲಿರಬಾರದು. ಜೀವನವಿಡಿ ಕನ್ನಡ ಉಸಿರಾಗಿರಬೇಕು ಆಗ ಮಾತ್ರ ಕನ್ನಡ ನಾಡು, ನುಡಿ, ನೆಲ, ಜಲವನ್ನು ಸಂರಕ್ಷಣೆ ಮಾಡಬಹುದು ಎಂದು ಹೇಳಿದರು.

        ಮುನ್ಸಿಪಲ್ ಕಾಂಪ್ಲೆಕ್ಸ್ ಯುವಕರ ಬಳಗದ ಭರತ್, ಅಜಯ್, ಶಶಿ, ಶಶಾಂಕ್, ಪ್ರಕಾಶ್, ನ್ಯಾಯವಾದಿ ರವಿ ಇನ್ನು ಮುಂತಾದವರು ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿದ್ದರು.ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನಂತರ ಎಲ್ಲರಿಗೂ ಸಿಹಿ ವಿತರಿಸಲಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link