ಜಿಲ್ಲಾಮಟ್ಟದ ವಿಶ್ವ ವಿಕಲಚೇತನರ ದಿನ ಆಚರಣೆ

ಬಳ್ಳಾರಿ

        ಸರ್ಕಾರದ ಯೋಜನೆಗಳು ವಿಕಲಚೇತನರಿಗೆ ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ತಲುಪುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಮಧ್ಯೆ ಸಮನ್ವಯ ಅಗತ್ಯವಾಗಿದ್ದು, ಅವರ ಏಳ್ಗೆಗೆ ಎಲ್ಲರು ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಬಿ.ಹಂದ್ರಾಳ ಅಭಿಪ್ರಾಯಪಟ್ಟರು.

        ಜಿಲ್ಲಾಡಳಿತದ ವತಿಯಿಂದ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವಿಕಲಚೇತರನ್ನು ನಾವು ಎಲ್ಲರಂತೆ ಸಮಾನವಾಗಿ ಪರಿಗಣಿಸಬೇಕು ಮತ್ತು ಅವರನ್ನು ಗೌರವಿಸಿ ಪ್ರೋತ್ಸಾಹಿಸಬೇಕಿದೆ ಎಂದರು.

        ವಿಕಲಚೇತನರು ಸರ್ಕಾರದ ಯೋಜನೆ ಪಡೆಯುವಲ್ಲಿ ಸಮಸ್ಯೆಗಳಿದ್ದಲ್ಲಿ ಈ ಬಗ್ಗೆ ನಮ್ಮ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತಂದರೆ, ಸಹಕಾರ ನೀಡುತ್ತೇವೆ. ಕಾನೂನಾತ್ಮಕ ಹೋರಾಟಕ್ಕೂ ಬೆಂಬಲವಿದೆ. ಪಿಂಚಣಿ, ಮಾಸಾಶನ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಉಚಿತವಾಗಿ ವಕೀಲರನ್ನು ಒದಗಿಸಿ ಕಾನೂನು ಸೌಲಭ್ಯ ಒದಗಿಸಲಾಗುವುದು ಎಂದು ಅವರು ಅಶ್ವಾಸನೆ ನೀಡಿದರು.

         ಎಲ್ಲಾ ರಂಗಗಳಲ್ಲಿ ಅಂಗವಿಕಲರಿಗೆ ಸಮಾನ ಅವಕಾಶ ನೀಡಿ ಸಾಮಾನ್ಯರಂತೆ ಬೆಳೆಯಲು ಅವಕಾಶ ಕೊಡಬೇಕು ಎಂಬುದನ್ನು ತಮ್ಮ ಮಾತುಗಳಲ್ಲಿ ಪ್ರಸ್ತಾಪಿಸಿದ ನ್ಯಾ.ಹಂದ್ರಾಳ್ ಅವರು,ವಿಕಲಚೇತನರನ್ನು ಬಹುತೇಕ ಕಡೆ ನಿರ್ಲಕ್ಷ್ಯ ವಹಿಸಿಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ವಿ.ಎಸ್.ಉಗ್ರಪ್ಪ, ಶಾಸಕ ಜಿ.ಸೋಮಶೇಖರ ರೆಡ್ಡಿ, ಜಿಪಂ ಅಧ್ಯಕ್ಷೆ ಸಿ.ಭಾರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗೇಶ್ ಬಿಲ್ವಾ ಮಾತನಾಡಿದರು.ವಿಕಲಚೇತನರು ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

        ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಂ.ಅಂಕಲಯ್ಯ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೆ.ಮಹಾಂತೇಶ್, ಗೋಪಾಲಕೃಷ್ಣ, ಉಮಾಪತಿ ಗೌಡ ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link