ಚಿತ್ರದುರ್ಗ:
ರೋಟರಿ ಕ್ಲಬ್ ಚಿತ್ರದುರ್ಗ ಹಾಗೂ ಮಂಗಳೂರಿನ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಿಂದ ರೋಟರಿ ಬಾಲಭವನದಲ್ಲಿ ಇತ್ತೀಚೆಗೆ ಹೃದಯ, ಜೀರ್ಣಾಂಗವ್ಯೂಹ, ಕಿಡ್ನಿ ಸಂಬಂಧಿತ ಸಮಸ್ಯೆಗಳಿಗೆ ಉಚಿತ ತಪಾಸಣಾ ಶಿಬಿರವನ್ನು ನಡೆಸಲಾಯಿತು.
ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಡಾ.ರಾಘವೇಂದ್ರ ಪ್ರಸಾದ್ ಉದ್ಯೋಗ, ವ್ಯವಹಾರ, ಆದಾಯಕ್ಕೆ ಕೊಡುವಷ್ಟು ಪ್ರಾಮುಖ್ಯತೆಯನ್ನು ಜನ ತಮ್ಮ ಆರೋಗ್ಯಕ್ಕೆ ಕೊಡುವುದಿಲ್ಲ. ಒತ್ತಡದ ಜೀವನದಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ ಮುಂದೊಂದು ದಿನ ಉಲ್ಬಣಿಸಿ ಜೀವಕ್ಕೆ ಅಪಾಯ ಎದುರಾಗುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.
ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರಿನ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಬಡವರಿಗೂ ಕೈಗೆಟುಕುವ ದರದಲ್ಲಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.
ಉಚಿತ ತಪಾಸಣಾ ಶಿಬಿರದಲ್ಲಿ ಹೃದಯ, ಉದರ ಮತ್ತು ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪತ್ತೆ ಹಚ್ಚಿ ಹೆಚ್ಚಿನ ಚಿಕಿತ್ಸೆಗಳಿದ್ದರೆ ಮಂಗಳೂರಿನ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಲಾಗುವುದು. ಚಿತ್ರದುರ್ಗ ಜಿಲ್ಲೆಯ ಜನತೆ ಇದರ ಪ್ರಯೋಜನ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷೆ ಜಯಶ್ರೀಷಾ, ಕಾರ್ಯದರ್ಶಿ ಪಿ.ಬಿ.ಶಿವರಾಂ, ಅಸ್ಟೆಂಟ್ ಗೌರ್ವನರ್ ರೊ.ಡಾ.ಸಿ.ತಿಪ್ಪೇಸ್ವಾಮಿ, ರೊ.ವೈ.ಚಂದ್ರಶೇಖರಯ್ಯ, ವೈ.ರವಿಕುಮಾರ್, ಡಿ.ಮಹಂತೇಶ್, ತರುಣ್‍ಷಾ, ಡಾ.ಗೌರವ್ ವೇದಿಕೆಯಲ್ಲಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ