ಹಾವೇರಿ :
ಜಿಲ್ಲಾ ನೌಕರರ ಸಂಘದ ಕಟ್ಟಡದ ಮುಂಭಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಹಾಲಪ್ಪನವರಮಠ ಹೇಳಿದರು.
ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಪ್ರಸಕ್ತ ಇರುವ ಕಟ್ಟಡದ ಮುಂಭಾಗದಲ್ಲಿ ಅಧ್ಯಕ್ಷರ ಕೋಠಡಿ ಇದ್ದು, ಇಲ್ಲಿನ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗುವುದು, ಅಧ್ಯಕ್ಷರ ಕೊಠಡಿಯನ್ನು ಇದೇ ಕಟ್ಟಡದಲ್ಲಿನ ಕೊಠಡಿಗಳಿಗೆ ಸ್ಥಳಾಂತರಿಸಲಾಗುವುದು ಎಂದರು.
ಪ್ರಸಕ್ತ ಇರುವ ಕಟ್ಟಡ ನಗರದ ಪ್ರಮುಖ ರಸ್ತೆಗೆ ಹೊಂದಿಕೊಂಡಿರುವುದರಿಂದ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡುವದರಿಂದ ಸಂಘಕ್ಕೆ ಆದಾಯ ಬರುತ್ತದೆ. ಇದರಿಂದ ಇನ್ನು ಹೆಚ್ಚಿನ ಕಾರ್ಯಕ್ರಮಗಳನ್ನು ರೂಪಿಸಬಹುದೆಂಬ ಉದ್ದೇಶದಿಂದ ನಾಲ್ಕು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಸದಸ್ಯರಾದ ಸಿ.ವಿ.ಹಿರೇಮಠ, ಎಂ.ರ.ಎಣ್ಣಿ, ಶಿವಲೀಲಾ ಗಡ್ಡದ ಹಾಗೂ ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ