ಸಫಾಯಿ ಕರ್ಮಚಾರಿಗಳಿಗೆ ಸಾಲ ಸೌಲಭ್ಯ : ಆಂದೋಲನದ ರೂಪದಲ್ಲಿ ಕೈಗೆತ್ತಿಕೊಳ್ಳಲು ಸೂಚನೆ

ಬಳ್ಳಾರಿ

           ಸಫಾಯಿ ಕರ್ಮಚಾರಿಗಳು ಹಾಗೂ ಅವರ ಅವಬಿತರ ಕಲ್ಯಾಣದ ನಿಟ್ಟಿನಲ್ಲಿ ಸಾಲ ಹಾಗೂ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಆನ್‍ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್ಮಚಾರಿಗಳಿಗೆ ಈ ಕುರಿತ ಮಾಹಿತಿ ಕಡಿಮೆ ಇದ್ದು, ಇದನ್ನು ಆಂದೋಲನದ ರೂಪದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕೈಗೆತ್ತಿಕೊಂಡು ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ಹೇಳಿದರು.

         ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಫಾಯಿ ಕರ್ಮಚಾರಿಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

       ಸಫಾಯಿ ಕರ್ಮಚಾರಿಗಳು ಬಹುತೇಕ ಅವಿದ್ಯಾವಂತರಾಗಿದ್ದು, ಅವರಿಗೆ ಆನ್ ಲೈನ್ ಪ್ರಕ್ರಿಯೆ ಬಗ್ಗೆ ಗೊತ್ತಿರುವುದಿಲ್ಲ. ಅಧಿಕಾರಿಗಳೇ ಮುತುವರ್ಜಿ ವಹಿಸಿ ಇದನ್ನು ಆಂದೋಲನ ರೂಪದಲ್ಲಿ ಮಾಡಿ ತಮ್ಮ ವ್ಯಾಪ್ತಿಯ ಈ ಸಫಾಯಿ ಕರ್ಮಚಾರಿಗಳಿಗೆ ಹಾಗೂ ಅವರ ಅವಲಂಬಿತರಿಗೆ ಸಾಲ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು. ಅವರಿಂದ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ದೊಡ್ಡ ದೊಡ್ಡ ಸ್ವ-ಉದ್ಯೋಗಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಎಂದು ಮನವೋಲಿಸಬೇಕು ಎಂದರು.

         ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಮಾತನಾಡಿ, ಇದಕ್ಕೆ ಸಂಬಂಧಿಸಿದಂತೆ ಡಿ.20ರಂದು ಆಂದೋಲನದ ರೂಪದಲ್ಲಿ ಈ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

        ಸಫಾಯಿ ಕರ್ಮಚಾರಿಗಳಿಗೆ ನಿಶ್ಚಿತ ಸಂಬಳ, ಆರೋಗ್ಯಕ್ಕೆ ಸಂಬಂಧಿಸಿದ ರಕ್ಷಾಕವಚಗಳು, ಸ್ವಂತ ಮನೆ, ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಭಾರತ ಸತಕಾರ ಮುಂದಡಿ ಇಟ್ಟಿದೆ ಎಂದರು.

         ಸಫಾಯಿ ಕರ್ಮಚಾರಿಗಳಿಗೆ ಸಿಗಬೇಕಾದ ಸೌಲಭ್ಯ ಮತ್ತು ಹಣಕಾಸಿನ ವಿಷಯದಲ್ಲಿ ಅನ್ಯಾಯ ಮಾಡಿದರೇ ಆ ದೇವರು ಕೂಡ ತಮ್ಮನ್ನು ಕ್ಷಮಿಸಲ್ಲ ಎಂದು ಅಧಿಕಾರಿಗಳಿಗೆ ಹೇಳಿದ ಅವರು, ಸಭೆಯಲ್ಲಿ ಇವರ ಕಲ್ಯಾಣಕ್ಕೆ ಸಂಬಂಧಿಸಿದಂತೆ ನೀಡಲಾದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

        ಪೌರಕಾಮಿರ್ಕರ ಆರೋಗ್ಯ, ಟೀಫನ್, ಮತ್ತು ಹೊರಗುತ್ತಿಗೆ ಆಧಾರದ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರ ವೇತನ, ಇ.ಎಸ್.ಐ., ಪಿ.ಎಫ್ ಹಾಗೂ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

          ನಂತರ ಅವರು ಮಹಾನಗರ ಪಾಲಿಕೆಯಲ್ಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ನಂತರ ವಿಮ್ಸ್ ಹಾಗೂ ಶ್ರೀರಾಂಪುರ ಕಾಲೋನಿಗೆ ಭೇಟಿ ಮಾಡಿ ಸಫಾಯಿ ಕರ್ಮಚಾರಿಗಳೊಂದಿಗೆ ಸಮಾಲೋಚಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link