ಬೆಂಗಳೂರು
ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಸರ್ಕಾರ 13 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಕೃಷಿ ಸಚಿವ ಎನ್.ಹೆಚ್. ಶಿವಶಂಕರ ರೆಡ್ಡಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮರಳೂರು ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಈವರೆಗೆ ಸರ್ಕಾರ 4 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದೆ. ಎರಡು ವರ್ಷಗಳ ಅವಧಿಯಲ್ಲಿ ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ನೀರು ಹರಿಯಲಿದೆ ಎಂದರು.
ಅಂತರ ಜಲ ವೃದ್ಧಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ 65 ಕೆರೆಗಳನ್ನು ತುಂಬಿಸುವ ಹೆಚ್.ಎನ್. ವ್ಯಾಲಿ ಯೋಜನೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದರು. ರಾಜ್ಯ ಸರ್ಕಾರ ಇದಕ್ಕಾಗಿ 883 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದು, ಒತ್ತಾಯದ ಮೇರೆಗೆ ಮೂರನೇ ಹಂತದಲ್ಲಿ ನೀರನ್ನು ಶುದ್ಧಿಕರಿಸಲು ಸರ್ಕಾರ ನಿರ್ಧರಿಸಿದೆ ಎಂದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
