ಅಡಿಲೇಡ್:
ಆಸ್ಟ್ರೇಲಿಯಾ ನೆಲದಲ್ಲಿ ಭಾರತವು ಮೊದಲ ಪಂದ್ಯ ಗೆದ್ದಿದ್ದು, ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಪಡೆದುಕೊಂಡಿದೆ.
ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 31 ರನ್‌ಗಳ ಅಂತರದ ಸ್ಮರಣೀಯ ಗೆಲುವು ದಾಖಲಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
ಭಾರತದ ಪರ ಪರಿಣಾಮಕಾರಿ ದಾಳಿ ಸಂಘಟಿಸಿದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ತಲಾ 3 ವಿಕೆಟ್ ಕಿತ್ತರೆ, ರವಿಚಂದ್ರನ್ ಅಶ್ವಿನ್ 2, ಇಶಾಂತ್ ಶರ್ಮಾ ಒಂದು ವಿಕೆಟ್ ಪಡೆದು ಮಿಂಚಿದರು.
ಕೊನೆಯ ದಿನವಾದ ಇಂದು ಟೆಸ್ಟ್ ಪಂದ್ಯವು ಅತ್ಯಂತ ರೋಚಕ ಘಟ್ಟಕ್ಕೆ ಹೋಗಿತ್ತು. ಆರಂಭದಲ್ಲಿ ಭಾರತದ ಮಡಿಲಲ್ಲಿ ಇದ್ದ ವಿಜಯಲಕ್ಷ್ಮಿ ಆಸ್ಟ್ರೇಲಿಯನ್ನರ ಕಡೆ ವಾಲುವುದರಲ್ಲಿತ್ತು ಆದರೆ ಕೊನೆಯ ಕ್ಷಣದಲ್ಲಿ ಭಾರತವು ಉತ್ತಮ ಬೌಲಿಂಗ್ ದಾಳಿ ಪ್ರದರ್ಶಿಸಿ ಗೆಲುವು ತಮ್ಮದಾಗಿಸಿಕೊಂಡರು.
ಪ್ರತಿಯೊಂದು ದಿನದಲ್ಲೂ ರೋಚಕತೆಗೆ ಸಾಕ್ಷಿಯಾದ ಪಂದ್ಯದಲ್ಲಿ ಕೊನೆಗೂ ಗೆಲುವು ದಾಖಲಿಸುವಲ್ಲಿ ವಿರಾಟ್ ಕೊಹ್ಲಿ ಪಡೆ ಯಶಸ್ವಿಯಾಗಿದೆ. ಈ ಮೂಲಕ ಆಸೀಸ್ ನೆಲದಲ್ಲಿ ಹೊಸ ಇತಿಹಾಸ ರಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
