ಸಾರ್ವಜನಿಕರಿಂದ ಧರ್ಮದೇಟು ತಿಂದ ಕಳ್ಳ

ಬೆಂಗಳೂರು

        ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಹಿಂಬಾಲಿಸಿ ಮೊಬೈಲ್,ಪರ್ಸ್ ಕಳವು ಮಾಡುತ್ತಿದ್ದ ಕಳ್ಳನೊಬ್ಬನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಅನ್ನಪೂರ್ಣೇಶ್ವರಿನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

       ಸ್ಥಳೀಯರು ಹಿಡಿದುಕೊಟ್ಟ ಪ್ರಮೋದ್‍ನನ್ನು ಬಂಧಿಸಿರುವ ಪೊಲೀಸರು ಆತನ ಜೊತೆ ಕಳವು ಕೃತ್ಯದಲ್ಲಿ ಭಾಗಿಯಾಗಿ ಪರಾರಿಯಾಗಿರುವ ಇನ್ನಿಬ್ಬರಿಗಾಗಿ ತೀವ್ರ ಶೋಧ ನಡೆಸಿದ್ದಾರೆ.ಭಾನುವಾರ ರಾತ್ರಿ 8ರ ವೇಳೆ ಅನ್ನಪೂರ್ಣೇಶ್ವರಿ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೈಕ್‍ನಲ್ಲಿ ಬಂದ ಮೂವರು ಪ್ರದೀಪ್ ಎಂಬವರ ಪರ್ಸ್ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದರು.

        ಕಳ್ಳತನ ಮಾಡುವ ವೇಳೆ ಪ್ರದೀಪ್ ಜೋರಾಗಿ ಕೂಗಿಕೊಂಡಿದ್ದಾರೆ.ಅಲ್ಲಿದ್ದ ಸಾರ್ವಜನಿಕರು ರಕ್ಷಣೆಗೆ ಧಾವಿಸಿ ಪರಾರಿಯಾಗುತ್ತಿದ್ದ ಕಳ್ಳ ಪ್ರಮೋದ್‍ನನ್ನು ಹಿಡಿದು ಧರ್ಮದೇಟು ಕೊಟ್ಟಿದ್ದು ಉಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link