ಹೊಸದಿಲ್ಲಿ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಹುದ್ದೆಗೆ ಉರ್ಜಿತ್ ಪಟೇಲ್ ಇಂದು ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ.
ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ . ಪಟೇಲ್ ರಾಜೀನಾಮೆ ನೀಡಿರುವುದು ಕೇಂದ್ರ ಸರಕಾರಕ್ಕೆ ಮುಜುಗರ ಉಂಟು ಮಾಡಿದೆ.

ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ನಡುವೆ ಉಂಟಾಗಿರುವ ಮನಸ್ತಾಪಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆದಿತ್ತು. ಊರ್ಜಿತ್ ಪಟೇಲ್ ರಾಜೀನಾಮೆ ನೀಡುವ ಬಗ್ಗೆ ನವೆಂಬರ್ ತಿಂಗಳ ಎರಡನೇ ವಾರದಲ್ಲಿ ಸುದ್ದಿ ಬಲವಾಗಿತ್ತು.








