ಬೆಂಗಳೂರು
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ” ಪ್ರಚಾರದ ಗಾಳಿಪಟಗಳು ನೆಲಕ್ಕುರುಳುವಂತಾಗಿವೆ ” ಎಂದು ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮಲೇಶಿಯಾ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಫಲಿತಾಂಶ ಕುರಿತು ಟ್ವೀಟ್ ಮಾಡಿ, ” ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಪ್ರಚಾರದ ಗಾಳಿ ಪಟಗಳು ನೆಲಕ್ಕುರುಳುತ್ತಿವೆ. ಇದು ಗೆದ್ದು ಬೀಗುವ ಸಮಯವಲ್ಲ. ಸೈದ್ಧಾಂತಿಕವಾಗಿ ಗಟ್ಟಿಗೊಂಡು, ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ ” ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ