ದಾವಣಗೆರೆ :
ಮೆಕ್ಕೆಜೋಳ ಮತ್ತು ಅದರ ಸೊಪ್ಪಿನ ಬಣವೆ ಹಾಗೂ ಶೇಂಗಾ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಘಟನೆ ಜಗಳೂರು ತಾಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಕಳೆದ ತಡರಾತ್ರಿ ನಡೆದಿದೆ.
ಹತ್ತಾರು ಬಣವೆಗಳು ಬೆಂಕಿಗೆ ಆಹುತಿಯಾಗಿದ್ದು, ಯಾರೋ ಕಿಡಿಗೇಡಿಗಳು ಬೆಂಕಿ ಹೆಚ್ಚಿರಬಹುದು ಎಂಬುದಾಗಿ ಶಂಕಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಐದು ಅಗ್ನಿಶಾಮಕ ದಳದ ವಾಹನಗಳು ಹಾಗೂ ಸಿಬ್ಬಂದಿಗಳು ಬೆಂಕಿ ನಿಯಂತ್ರಣಕ್ಕೆ ಪ್ರಯತ್ನಿಸಿದರೂ ಬಣವೆಯಿಂದ ಬಣವೆಗೆ ಬೆಂಕಿಯ ಕೆನ್ನಾಲಿಗೆ ಹರಡುತ್ತಿದ್ದರಿಂದ ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸ ಪಡಬೇಕಾಯಿತು.
ಕೂಡಲೇ ದಾವಣಗೆರೆ ಜಗಳೂರು, ಚಿತ್ರದುರ್ಗ, ಕೊಟ್ಟೂರು, ಕೂಡ್ಲಗಿ ಹೀಗೆ ಐದು ಕಡೆಯಿಂದ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಿಯಂತ್ರಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.ಬಣವೆಗಳಿಗೆ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ