ಬೆಂಗಳೂರು
ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಆಹಾರ ಖಾತೆ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.ಬೆಳಗಾವಿಯ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂಪುಟ ವಿಸ್ತರಣೆ ಖಚಿತ.ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ ನಡೆಯಲಿದೆ.ಹೆಚ್ಚುವರಿ ಖಾತೆ ಬದಲಾಯಿಸಿದರೆ ನಮಗೇನು ಸಮಸ್ಯೆ ಇಲ್ಲ.ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ.ಸಂಪುಟದಿಂದ ನನ್ನನ್ನು ಕೈಬಿಟ್ಟರೂ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಇನ್ನೂ ಎರಡು ಸ್ಥಾನ ಕೇಳಿದ್ದೇವೆ.ಈ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ 80 ಸ್ಥಾನ ಬಂದಿದೆ. ಇದಕ್ಕೆ ಅಲ್ಪಸಂಖ್ಯಾತ ಸಮುದಾಯವೂ ಕಾರಣ ಎಂದರು.
ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರ ಹೆಬ್ಬೆಟ್ಟು ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್, ಅದು ಅವರ ವೈಯಕ್ತಿಕ ಅಭಿಪ್ರಾಯ.ಮುಖ್ಯಮಂತ್ರಿಯವರಿಗೆ ಎಲ್ಲ ಸ್ವಾತಂತ್ರ್ಯ ಕೊಡಲಾಗಿದೆ.ನಾವು ಯಾವುದೇ ರೀತಿಯ ಒತ್ತಡ ಹಾಕಿಲ್ಲ.ಕುಮಾರಸ್ವಾಮಿ ಐದು ವರ್ಷ ಮುಖ್ಯಮಂತ್ರಿ ಅಂತ ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಿದರು..
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ