ಗುಬ್ಬಿ
ಸರ್ಕಾರದ ಯೋಜನೆಗಳು ಅರ್ಹಫಲಾನುಭವಿಗಳಿಗೆ ನಿಗಧಿತ ಅವದಿಯಲ್ಲಿ ಸಮರ್ಪಕವಾಗಿ ತಲುಪಿಸುವುದರ ಜೊತೆಗೆ ಸರ್ಕಾರದ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವತ್ತ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೂಕ್ತವಾದ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಅನುಸೂಯನರಸಿಂಹಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಅಂಗನವಾಡಿ ಸಿಬ್ಬಂದಿಗಳು ಕರ್ತವ್ಯದ ವೇಳೆ ಮನೆಕೆಲಸದಲ್ಲಿ ತೊಡಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಅಲ್ಲದೆ ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಸಾಮಗ್ರಿಗಳನ್ನು ಮನೆಗೆ ಸಾಗಿಸುತ್ತಿರುವ ಬಗ್ಗೆಯೂ ದೂರುಗಳು ಬಂದಿರುವುದರಿಂದ ಈ ಬಗ್ಗೆ ಸಂಬಮಧಿಸಿದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಗ್ರಾಮಗಳ ಸಾರ್ವಜನಿಕರು ಮತ್ತು ಶಾಲೆ, ಅಂಗನವಾಡಿ ಕೇದ್ರಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವತ್ತ ಗ್ರಾಮ ಪಂಚಾಯ್ತಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿನ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವತ್ತ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದ ಅವರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ವಿಶೇಷ ಗಮನಹರಿಸುವಂತೆ ಸೂಚಿಸಿದ ಅವರು ಗ್ರಾಮೀಣ ಪ್ರಧೇಶಗಳಲ್ಲಿ ಸ್ವಚ್ಚತೆಗೆ ಪಂಚಾಯ್ತಿ ಸಿಬ್ಬಂದಿಗಳು ಹೆಚ್ಚಿನ ಅಧ್ಯತೆ ನೀಡುವಂತೆ ತಿಳಿಸಿದರು.
ಕೃಷಿ ಇಲಾಖೆಯಿಂದ ರ್ಯತರು ನಿರ್ಮಿಸಿಕೊಂಡಿರುವ ಕೃಷಿ ಹೊಂಡಗಳಲ್ಲಿ ಅವಘಡಗಳು ಸಂಭವಿಸುತ್ತಿರುವ ಸಂಖ್ಯೆ ಹೆಚ್ಚುತ್ತಿರುವುದರಿಂದ ಕೃಷಿ ಹೊಂಡ ನಿರ್ಮಿಸಿರುವ ರೈತರು ಹೊಂಡದ ಸುತ್ತಲೂ ಬೆಲಿ ನಿರ್ಮಿಸುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ಕೃಷಿ ಇಲಾಖೆವತಿಯಿಂದ ಹೊಂಡಕ್ಕೆ ಬೇಲಿ ನಿರ್ಮಿಸಿಕೊಳ್ಳಲು ಸರ್ಕಾರದವತಿಯಿಂದ ಶೇ50 ರಷ್ಟು ಆರ್ಥಿಕ ನೆರವು ನೀಡುತ್ತಿದ್ದು ಇದನ್ನು ರೈತರು ಸದುಪಯೋಗಪಡಿಸಿಕೊಂಡು ಕಡ್ಡಾಯವಾಗಿ ಕೃಷಿ ಹೊಂಡದ ಸುತ್ತ ಬೇಲಿ ನಿರ್ಮಿಸಿಸಿಕೊಳ್ಳುವಂತೆ ಸ್ಥಾಯಿ ಸಮಿತಿ ಅಧ್ಯಕ್ಷ ಅ.ನಾ,ಲಿಂಗಪ್ಪ ತಿಳಿಸಿದರು.
ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಅರಣ್ಯ, ಪಶು ಸಂಗೋಪನೆ, ತೋಟಗಾರಿಕೆ, ಕೃಷಿ. ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಅಭಿವೃಧ್ದಿ ಯೋಜನೆಗಳ ಪ್ರಗತಿ ಪರಿಶೀಲನೆ ನಡಸಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷೆ ಕಲ್ಪನಾ, ಸ್ಥಾಯಿ ಸಮಿತಿ ಅಧ್ಯಕ್ಷ ಅ.ನಾ.ಲಿಂಗಪ್ಪ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹಯ್ಯ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.