ಡಿ.15ರಂದು ದೇಹದಾನ ಸಂಸ್ಥೆಯ ಸಮಾವೇಶ

ದಾವಣಗೆರೆ :

      ದೇಹದಾನ ಸಂಸ್ಥೆಯ 7ನೇ ವಾರ್ಷಿಕ ಸಮಾವೇಶ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಡಿ.15ರಂದು ನಗರದ ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ ಎಂದು ಅಂಗರಚನಾ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಡಿ.ನಿರ್ಮಲಾ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ಆರೋಗ್ಯ ತಪಾಸಣೆಯನ್ನು ಬಾಪೂಜಿ ಆಸ್ಪತ್ರೆಯ ಹೊರರೋಗಿಗಳ ವಿಭಾಗದಲ್ಲಿ ನಡೆಸಲಾಗುವುದು. ಬೆಳಗ್ಗೆ 11 ಗಂಟೆಗೆ ಜೆಜೆಎಂ ಮೆಡಿಕಲ್ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ದೇಹದಾನಿಗಳ ಸಮಾವೇಶ ಜರುಗಲಿದೆ

         ಬಾಪೂಜಿ ವಿದ್ಯಾಸಂಸ್ಥೆ ಗೌವವ ಕಾರ್ಯದರ್ಶಿ ಶಾಮನೂರು ಶಿವಶಂಕರಪ್ಪ, ಜಂಟಿ ಕಾರ್ಯದರ್ಶಿ ಎಸ್.ಎಸ್.ಮಲ್ಲಿಕಾರ್ಜುನ, ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಗಬಾಲಯ್ಯ, ಎಸ್ಪಿ ಆರ್.ಚೇತನ್, ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಬಿ.ಮುರುಗೇಶ ಮತ್ತಿತರರು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.

        ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆ, ಅಂಗಗಳ ಸಂಪೂರ್ಣ ಜ್ಞಾನ, ಚಿಕಿತ್ಸೆ ಹಾಗೂ ಹೆಚ್ಚಿನ ಸಂಶೋಧನೆಗೆ ದೇಹ ಅಗತ್ಯವಾಗಿದೆ. ಮರಣಾನಂತರ ದೇಹದಾನ ಮಾಡಲು ಇಚ್ಛಿಸುವವರು ಕುಟುಂಬ ಸದಸ್ಯರ ಒಪ್ಪಿಗೆ ಪಡೆದು, ನಿಗಧಿತ ಅರ್ಜಿಯೊಂದಿಗೆ ಹೆಸರು ನೋಂದಾಯಿಸಿಕೊಳ್ಳಬಹುದು. ದಾನಿಗಳಿಗೆ ಜೆಜೆಎಂ ಮೆಡಿಕಲ್

        ಕಾಲೇಜು ಮತ್ತು ಆಸ್ಪತ್ರೆಯ ಹೊರರೋಗಿಗಳ ವಿಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ, ಒಳರೋಗಿಗಳ ವಿಭಾಗದಲ್ಲಿ ಶೇ.25-30ರಷ್ಟು ರಿಯಾಯಿತಿ ನೀಡಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಡಾ.ಜಿ.ಎಫ್.ಮಾವಿನಶೆಟ್ಟರ್, ಡಾ.ಶೋಭಾ ಇತರರು ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link