ಮೈಸೂರು:
ಚಾಮುಂಡಿ ಬೆಟ್ಟದಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಭಕ್ತರಿಗೆ ಪ್ರವೇಶವನ್ನು ನಿರ್ಬಂಧ ಮಾಡಲಾಗಿದೆ.
ನೌಕರರು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದರು. ದೇವಾಲಯದ 183 ಮಂದಿ ಖಾಯಂ ನೌಕರರು ಹಾಗೂ 37 ಮಂದಿ ಗುತ್ತಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ.
ದೇವಸ್ಥಾನದ ಸಿಬ್ಬಂದಿ ಭಕ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ಬಿಡಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಅರ್ಚಕರು ಮತ್ತು ಸಿಬ್ಬಂದಿ ಅನಿರ್ದಾಷ್ಟವಧಿ ಮುಷ್ಕರ ನಡೆಸುತ್ತಿದ್ದಾರೆ. ಕೊನೆಗೂ ಪ್ರತಿಭಟನಾ ಸಿಬ್ಬಂದಿ ಬೇಡಿಕೆಗೆ ಮಣಿದ ಪೊಲೀಸರು ಹೊರಗಡೆಯಿಂದಲೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಗರ್ಭಗುಡಿಯ ಮುಂಭಾಗವೇ ಅರ್ಚಕರು ಧರಣಿ ಕುಳಿತು ಪ್ರತಿಭಟನೆ ಆರಂಭಿಸಿದ್ದು, ದೇವಾಲಯದ ಒಳಗೆ ಹೊರಗೆ ಎರಡು ಕಡೆ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಚಾಮುಂಡಿ ಬೆಟ್ಟದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಭಟನೆ ನಡೆಯುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








