ಬೆಂಗಳೂರು
ವೇಗವಾಗಿ ಬೈಕ್‍ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಆಯತಪ್ಪಿ ಬಿದ್ದು ಮೃತಪಟ್ಟಿರುವ ದುರ್ಘಟನೆ ಯಲಹಂಕ ಸಂಚಾರ ಪೆÇಲೀಸ್ ಠಾಣೆಯ ಅಟ್ಟೂರು ಲೇಔಟ್‍ನ ಮೇಜರ್ ಉನ್ನಿಕೃಷ್ಣನ್ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಎಂ.ಎಸ್ ಪಾಳ್ಯದ ಜೋಶ್ವಾ (28)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಜೋಶ್ವಾ ಸಂಜೆ 5.45ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಪಲ್ಸರ್ ಬೈಕ್‍ನಲ್ಲಿ ವಾಪಾಸ್ಸಾಗುತ್ತಿದ್ದರು.
ಮಾರ್ಗಮಧ್ಯೆ ಮೇಜರ್ ಉನ್ನಿಕೃಷ್ಣನ್ ರಸ್ತೆಯಲ್ಲಿ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಯಲಹಂಕ ಸಂಚಾರ ಪೆÇಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








