ಯುಎನ್ಐ
ಬೆಳ್ಳೂರು ಕೃಷ್ಣಮಾಚಾರ್ ಮತ್ತು ಶೇಷಮ್ಮ ಸ್ಮಾರಕ ನಿಧಿ ಟ್ರಸ್ಟ್ ನಿಂದ ಯೋಗಾಚಾರ್ಯ ಪದ್ಮ ವಿಭೂಷಣ ಬಿ .ಕೆ. ಎಸ್ . ಅಯ್ಯಂಗಾರ್ ರವರ ಜನ್ಮಶತಮಾನೋತ್ಸವವನ್ನು ಡಿ.17 ರಂದು ಕೋಲಾರ ಜಿಲ್ಲೆಯ ಬೆಳ್ಳೂರಿನ ಯೋಗಾಚಾರ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪ್ರಶಾಂತ್ ಅಯ್ಯಂಗಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ್ಮಶತಮಾನೋತ್ಸವದ ಜೊತೆಗೆ ಗುರೂಜಿ ಹಾಗೂ ಅವರ ಧರ್ಮ ಪತ್ನಿಯ ಪ್ರತಿಮೆ ಅನಾವರಣಗೊಳಿಸಲಾಗುತ್ತದೆ. ಅಂದು ಸಂಜೆ 4ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು
ಕೈಲಾಸಾಶ್ರಮ ಮಾಹಾಸಂಸ್ಥಾನದ ಜಯೇಂದ್ರಪುರಿ ಮಹಾಸ್ವಾಮಿ ವಹಿಸಿಕೊಳ್ಳಲಿದ್ದು, ಮುಖ್ಯ ಅಥಿತಿಗಳಾಗಿ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ, ಕೇಂದ್ರ ತನಿಖಾ ಸಂಸ್ಥೆಯ ನಿವೃತ್ತ ನಿರ್ದೇಶಕ ಡಿ.ಆರ್.ಕಾರ್ತಿಕೇಯನ್ ಹಾಗೂ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








