ಬೆಂಗಳೂರು
ಚಾಮರಾಜನಗರ ಜಿಲ್ಲೆ ಸುಳ್ವಾಡಿ ಗ್ರಾಮದ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಸರ್ಕಾರ ಮತ್ತು ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳ ಕೊರತೆಯಿದೆ, ಕೆಆರ್ ಆಸ್ಪತ್ರೆಯಲ್ಲಿ ಕನಿಷ್ಠ 50 ವೆಂಟಿಲೇಟರ್ಗಳ ಅವಶ್ಯಕತೆ ಇದೆ ಎಂದರು.
ಮೂಲಸೌಲಭ್ಯಗಳ ಕೊರತೆ ಹಿನ್ನೆಲೆಯೇ ಹೆಚ್ಚಿನ ಸಾವು ಸಂಭವಿಸಲು ಕಾರಣವಾಗಿದೆ. ಹನೂರು ಮತ್ತು ಕೊಳ್ಳೆಗಾಲ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ವ್ಯವಸ್ಥೆ ಇಲ್ಲ ಚಾಮರಾಜನಗರ ಜಿಲ್ಲಾಸ್ಪತ್ರೆಗಳಲ್ಲಿ ಇರುವ ವೆಂಟಿಲೇಟರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಸಮಧಾನ ಹೊರ ಹಾಕಿದರು.
ಈ ಬಗ್ಗೆ ವಿಧಾನಮಂಡಲದಲ್ಲಿ ವಿಶೇಷ ಚರ್ಚೆ ಮಾಡಲಾಗುವುದು ಮೃತರ ಕುಟುಂಬಕ್ಕೆ ಪರಿಹಾರದ ಮೊತ್ತವನ್ನು 10 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಬೇಕು ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ