ಹಾವೇರಿ :
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಅಡಿಯಲ್ಲಿ ತಾಲೂಕಿನ ಹಾಲಗಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ಲೈನ್ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ಧರಾಜ ಕಲಕೋಟಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂಗಾರು ಮಳೆ ತೀವ್ರ ಕಡಿಮೆಯಾಗಿರುವುದರಿಂದ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಅದರಲ್ಲೂ ಮುಂಬರುವ ಬೇಸಿಗೆ ಸಂದರ್ಭದಲ್ಲಿ ನೀರಿನ ಸಮಸ್ಯೆ ತೀವ್ರವಾಗಲಿದ್ದು, ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮಸ್ಥರು ನೀರನ್ನು ಅನಗತ್ಯವಾಗಿ ಪೊಲು ಮಾಡದೆ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಪಂಚಾಯಿತಿ ಸದಸ್ಯ ಕರಿಯಪ್ಪ ಉಂಡಿ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಾ ಡೋಲೆ, ಗ್ರಾಮಸ್ಥರಾದ ನಾಗನಗೌಡ ಕಾಕಡೆ, ಮಂಜುನಾಥ ಡೋಲೆ, ಜಗನ್ನಾಥ ಡಿಸ್ಲೆ, ವೆಂಕರಡ್ಡಿ ನಾಡರ್, ಸಿದ್ಧಲಿಂಗಯ್ಯ ಹೆಬ್ಬಾಳಮಠ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ