ಪುರಭವನದ ಎದುರು ಬ್ಯಾಂಕ್ ಮಿತ್ರರರ ಪ್ರತಿಭಟನೆ ….!!!

ಬೆಂಗಳೂರು

        ಸೇವೆಯನ್ನು ಖಾಯಂಗೊಳಿಸುವ ಜತೆಗೆ ಸೂಕ್ತ ವೇತನ, ಭತ್ಯೆ, ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ “ಬ್ಯಾಂಕ್ ಮಿತ್ರರು” ಬೆಂಗಳೂರಿನ ಪುರಭವನದ ಎದುರು ಇಂದಿನಿಂದ ಎರಡು ದಿನಗಳ ಪ್ರತಿಭಟನೆ ಆರಂಭಿಸಿದ್ದಾರೆ.

        ಕೇಂದ್ರ ಸರ್ಕಾರದ ಆರ್ಥಿಕ ಸೇರ್ಪಡೆ ಕಾರ್ಯಕ್ರಮದಡಿ ಸಾರ್ವಜನಿಕ, ಖಾಸಗಿ ಸೇರಿ ವಿವಿಧ ಬ್ಯಾಂಕ್ ಗಳಿಗೆ ಬ್ಯಾಂಕ್ ಮಿತ್ರರನ್ನು ನೇಮಿಸಿಕೊಂಡಿದ್ದು, ಬಹುತೇಕ ಎಲ್ಲರೂ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವೃದ್ಧಾಪ್ಯ ವೇತನ, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದಾರೆ. ಬ್ಯಾಂಕಿಂಗ್ ಸೌಲಭ್ಯವಿಲ್ಲದ ಕಡೆಗಳಲ್ಲಿ ದಿನನಿತ್ಯ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೌಲಭ್ಯ ಒದಗಿಸಲು ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

         ಹೆಚ್ಚು ಪರಿಶ್ರಮ ಮತ್ತು ಬದ್ಧತೆಯಿಂದ ಕೆಲಸ ಮಾಡುವ ಬ್ಯಾಂಕ್ ಮಿತ್ರರಿಗೆ ಕೇವಲ ಮಾಸಿಕ 2 ರಿಂದ 5 ಸಾವಿರ ರೂ ಮಾಸಿಕ ವೇತನ ನೀಡಲಾಗುತ್ತಿದೆ. ಸಾಮಾಜಿಕ ಮತ್ತು ಸೇವಾ ಭದ್ರತೆ ಇಲ್ಲವಾಗಿದೆ ಎಂದು ಎಂದು ಪ್ರತಿಭಟನಾಕಾರು ಆರೋಪಿಸಿದ್ದಾರೆ.

        ಈ ಪ್ರತಿಭಟನೆಗೆ ರಾಜ್ಯ ಪ್ರದೇಶ ಬ್ಯಾಂಕ್ ನೌಕರರ ಸಂಘ ಬೆಂಬಲ ನೀಡಿದ್ದು, ಕರ್ನಾಟಕ ರಾಜ್ಯ ಬ್ಯಾಂಕ್ ಮಿತ್ರರ ಸಂಘದ ಅಧ್ಯಕ್ಷ ಎಂ.ಸಿ.ಡೋಂಗ್ರೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link