ನಿರುದ್ಯೋಗಿಗಳಿಗೆ ಕೆಲಸ ನೀಡಲು ಎಐಡಿವೈಒ ಆಗ್ರಹ.

ಹೊಸಪೇಟೆ :

       ಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸುವುದು, ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳಿಗಾಗಿ ಆಗ್ರಹಿಸಿ ಎಐಡಿವೈಒ ಯುವಜನ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

         ಇಲ್ಲಿನ ಡಾ.ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

        ಈ ವೇಳೆ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶರಣಪ್ಪ ಉದ್ದಾಳ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಹೇಳಿ ಉದ್ಯೋಗ ಸೃಷ್ಟಿಸದೇ, ಬರೀ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಯಾವ ಸರ್ಕಾರಗಳು ಖಾಲಿ ಹುದ್ದೆಗಳನ್ನು ತುಂಬುತ್ತಿಲ್ಲ. ದಿನೇ ದಿನೇ ಉದ್ಯೋಗ ಸೃಷ್ಟಿಯ ಪ್ರಮಾಣ ಕಡಿಮೆಯಾಗುತ್ತಿದೆ. ಪ್ರತಿವರ್ಷ 1.35 ಕೋಟಿ ಯುವ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ.

          ಗ್ರಾಮೀಣ ಹಾಗು ನಗರ ಪ್ರದೇಶದಲ್ಲಿ ಯುವ ಸಮೂಹ ಉದ್ಯೋಗವಿಲ್ಲದೇ ಅಲೆದಾಡುತ್ತಿದ್ದಾರೆ. ಇದರಿಂದ ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಕೋಳೂರು ಪಂಪಾಪತಿ ಮಾತನಾಡಿ, ನಿರುದ್ಯೋಗದ ವಿರುದ್ದ ರಾಷ್ಟ್ರಮಟ್ಟದ ಪ್ರತಿಭಟನೆಯನ್ನು 2019ರ ಫೆಬ್ರುವರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ನಂತರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಯುವಜನ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಎಚ್.ಎರ್ರಿಸ್ವಾಮಿ, ಜಿಲ್ಲಾ ಸಮಿತಿಯ ಸೇತು ಮಾಧವ, ತಾಲೂಕು ಸಮಿತಿಯ ರವಿ, ಹುಲುಗಪ್ಪ, ಅಭಿಷೇಕ್, ಉಮೇಶ, ವಿದ್ಯಾರ್ಥಿಗಳಾದ ತಿಪ್ಪೇಸ್ವಾಮಿ,ಕೃಷ್ಣ, ಕನಕೇಶ, ಚಿರಂಜೀವಿ ಸೇರಿದಂತೆ ಇನ್ನಿತರರು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link