ಬಾಗಲಕೋಟೆ:
ಶಾಲೆಯ ಮಧ್ಯಾಹ್ನದ ಬಿಸಿಯೂಟದ ಸಾಂಬಾರಿನಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಚಿಕಿತ್ಸೆಗಾಗಿ ಕಮತಗಿ ಸರ್ಕಾರಿ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. 15 ವಿದ್ಯಾರ್ಥಿಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 139 ವಿದ್ಯಾರ್ಥಿಗಳನ್ನು ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಡಿಪಿಐ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದ ಕಿಚ್ಚುಗುತ್ತಿ ಮಾರಮ್ಮ ವಿಷ ಪ್ರಸಾದ ಸೇವಿಸಿ 15 ಮಂದಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ ಇಂಥದ್ದೊಂದು ಘಟನೆ ಸಂಭವಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
