ಬೆಂಗಳೂರು
ಮನೆಪಾಠಕ್ಕೆ ಬರುತ್ತಿದ್ದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಕಾಮುಕ ಟ್ಯೂಷನ್ ಮಾಸ್ಟರ್ನನ್ನು ಅಶೋಕನಗರ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಅನೇಪಾಳ್ಯದ ಮುನೀರ್ ಸಾಬ್ ಬಂಧಿತರಾಗಿದ್ದು, ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಅಶೋಕನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮುನೀರ್ ಸಾಬ್ ಅನೇಪಾಳ್ಯದಲ್ಲಿ ಟ್ಯೂಷನ್ ನಡೆಸುತ್ತಿದ್ದು ಈತನ ಕೇಂದ್ರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೋಗುತ್ತಿದ್ದ. ತರಗತಿಯ ವೇಳೆ ಮುನೀರ್ ಸಾಬ್ ಹೆಚ್ಚಾಗಿ ಲೈಂಗಿಕ ಚಟುವಟಿಕೆಯ ಬಗ್ಗೆ ಮಾತನಾಡುತ್ತಿದ್ದ. ಅಷ್ಟೇ ಅಲ್ಲದೆ ತನ್ನ ಮೊಬೈಲ್ನಲ್ಲಿ ಸೆಕ್ಸ್ ವಿಡಿಯೋ ತೋರಿಸಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ.
ಲೈಂಗಿಕ ಕಿರುಕುಳದ ಹೀನ ಕೃತ್ಯವನ್ನ ವಿಡಿಯೋ ಮಾಡಿರುವ ಆರೋಪಿಯು ಅದನ್ನಿಟ್ಟುಕೊಂಡು ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ಟ್ಯೂಷನ್ ಮಾಸ್ಟರ್ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿ ಪೋಷಕರಿಗೆ ತಿಳಿಸಿದ್ದಾನೆ. ತಕ್ಷಣವೇ ಪೋಷಕರು ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ವಿದ್ಯಾರ್ಥಿಯ ಹೇಳಿಕೆ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದು, ಮುನೀರ್ ಸಾಬ್ನನ್ನು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








