ನವದೆಹಲಿ: 

ಮಾಜಿ ಪ್ರಧಾನಿ ದಿವಂಗತ ಶ್ರೀ ರಾಜೀವ್ ಗಾಂಧಿ ಅವರಿಗೆ ನೀಡಲಾಗಿದ್ದ ಮರಣೊತ್ತರ ಭಾರತ ರತ್ನ ಪ್ರಶಸ್ತಿಯನ್ನು ಹಿಂಪಡೆಯಬೇಕೆಂಬ ಚಳುವಳಿಗೆ ಬೆಂಬಲಿಸಲು ಹಿಂದೇಟು ಹಾಕಿದ ದೆಹಲಿಯ ಶಾಸಕಿ ಅಲ್ಕಾ ಲಾಂಬ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
1984 ರ ಸಿಖ್ ನರಮೇಧಕ್ಕೆ ಸಂಬಂಧಿಸಿದಂತೆ ನಿರ್ಣಯ ಕೈಗೊಂಡ ನಂತರ ದೆಹಲಿ ವಿಧಾನಸಭೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಲಾಗಿರುವ ಭಾರತ ರತ್ನ ಪ್ರಶಸ್ತಿಯನ್ನು ಹಿಂಪಡೆಯಬೇಕೆಂಬ ಕೂಗು ಕೇಳಿಬಂದಿತ್ತು. ಆದರೆ ಇದಕ್ಕೆ ಒಪ್ಪದ ಶಾಸಕಿ ಅಲ್ಕಾ ಲಾಂಬ ಅವರನ್ನು ರಾಜೀನಾಮೆ ಕೊಡಿ ಎಂದು ಕೇಜ್ರಿವಾಲ್ ಆಗ್ರಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
