ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ : ಎಂ.ಮಲ್ಲಿಕಾರ್ಜುನ್

ಚಳ್ಳಕೆರೆ

          ರಾಷ್ಟ್ರ ಕವಿ ಕುವೆಂಪುರವರ ಜನ್ಮ ದಿನವನ್ನು ವಿಶ್ವಮಾನವ ದಿನಾಚರಣೆಯಾಗಿ ಆಚರಿಸುವ ಹಿನ್ನೆಲೆಯಲ್ಲಿ ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶನಿವಾರ ತುರ್ತು ಪೂರ್ವಭಾವಿ ಸಭೆಯನ್ನು ನಡೆಸಿತು.

           ಸಭೆಯ ಅಧ್ಯಕ್ಷತೆ ವಹಿಸಿದ್ದ ಆಚರಣಾ ಸಮಿತಿ ಅಧ್ಯಕ್ಷ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಮಾತನಾಡಿ, ಕನ್ನಡ ನಾಡಿನ ಸಾಹಿತ್ಯ ಸೇವೆಯಲ್ಲಿ ತಮ್ಮದೇಯಾದ ವಿಶೇಷ ಆಮೋಘ ಸೇವೆಯನ್ನು ಸಲ್ಲಿಸಿದ ಕನ್ನಡ ಭಾಷೆಯ ಮೌಲ್ಯವನ್ನು ಸಂರಕ್ಷಿಸಿದ ಮಹಾನ್ ಧೀಮಂತ ಸಾಹಿತಿ, ಲೇಖಕ, ಕವಿ ಕುವೆಂಪುರವರ ಸಾಧನೆಗಳನ್ನು ಯುವ ಜನರಿಗೆ ಬಿತ್ತರಿಸುವ ಸಲುವಾಗಿ ಸರ್ಕಾರ ಈ ಕಾರ್ಯಕ್ರಮವನ್ನು ರೂಪಿಸಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಕನ್ನಡ ಪರ ಸಂಘಟನೆಗಳು, ಸಹಕಾರ ನೀಡುವಂತೆ ಮನವಿ ಮಾಡಿದರು.

         ಡಿ.29ರ ಶನಿವಾರ ಬೆಳಗ್ಗೆ 11ಕ್ಕೆ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆಯನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆ ತೀರ್ಮಾನಿಸಿತು. ಕುವೆಂಪುರವರ ಬಗ್ಗೆ ಡಾ.ಗುರುನಾಥ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಜಾಗೃತೆ ವಹಿಸಬೇಕೆಂದು ತಹಶೀಲ್ದಾರ್ ಸೂಚಿಸಿದರು.

         ಪೂರ್ವಭಾವಿ ಸಭೆಯಲ್ಲಿ ಪೌರಾಯುಕ್ತ ಜೆ.ಟಿ.ಹನುಮಂತರಾಜು, ಎಚ್‍ಪಿಪಿಸಿ ಕಾಲೇಜು ಪ್ರಾಂಶುಪಾಲ ಪ್ರೊ.ಜಿ.ವೆಂಕಟೇಶ್, ನಗರಸಭಾ ಸದಸ್ಯರಾದ ಸುಮಾಭರಮಣ, ಸುಮಕ್ಕ ಆಂಜನೇಯ, ಪಾಲಮ್ಮ, ಜೈತುಂಬಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್.ಪ್ರೇಮಸುಧಾ, ಆಕ್ಷರ ದಾಸೋಹ ಅಧಿಕಾರಿ ತಿಪ್ಪೇಸ್ವಾಮಿ, ಸಮಾಜಕಲ್ಯಾಣಾಧಿಕಾರಿ ರವಿಶಂಕರ್, ಪರಿಶಿಷ್ಟ ವರ್ಗ ಇಲಾಖೆ ಡಿ.ದಯಾನಂದ, ಕಂದಾಯಾಧಿಕಾರಿ ಶರಣಬಸಪ್ಪ, ಗ್ರಾಮ ಲೆಕ್ಕಾಧಿಕಾರಿ ರಾಜೇಶ್, ಡಿ.ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

 

Recent Articles

spot_img

Related Stories

Share via
Copy link
Powered by Social Snap