ಬೆಂಗಳೂರು:
ನಾನು ರಾಜೀನಾಮೆ ನೀಡುವುದಕ್ಕೆ ಮುಂದಾಗಿದ್ದು, ಇನ್ನು 4 ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ನಾನು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾನು ಬದ್ದನಾಗಿರುವೆ. ನಾನು ರಾಜೀನಾಮೆ ನೀಡುವುದು ಸತ್ಯ, ಇನ್ನು 4 ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ದೋಸ್ತಿ ಸರಕಾರದ ಸಚಿವ ಸಂಪುಟ ಪುನರ್ ರಚನೆ ವೇಳೆಯಲ್ಲಿ ರಮೇಶ್ ಜಾರಕಿಹೊಳಿಯವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿದ್ದು, ಇದರಿಂದ ಅವರು ಸಿಟ್ಟಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಈ ಮೂಲಕ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಬಿದ್ದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
