ತುಮಕೂರು:
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡು ಎರ್ಟಿಗಾ ಕಾರೊಂದು ಸುಟ್ಟು ಕರಕಲಾದ ಘಟನೆ ನಗರದ ಭದ್ರಮ್ಮ ಛೌಟ್ರಿ ಸಿಗ್ನಲ್ ಬಳಿ ನಡೆದಿದೆ.
ಸಿಗ್ನಲ್ ಬಳಿ ಬಂದು ನಿಂತ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಕಾರು ಸುಟ್ಟು ಕರಕಲಾಗಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ