ತಂತ್ರಗಾರಿಕೆ ಆರಂಭಿಸಿದ ಕಾಂಗ್ರೆಸ್ …!!!

ಬೆಂಗಳೂರು

          ಲೋಕಸಭೆ ಚುನಾವಣೆಗೆ ಬಿಜೆಪಿ ತೀವ್ರ ಸಿದ್ಧತೆಯಲ್ಲಿ ತೊಡಗಿರುವ ಬೆನ್ನಲ್ಲೆ ಕಾಂಗ್ರೆಸ್ ಸಹ ತನ್ನ ತಂತ್ರಗಾರಿಕೆ ಆರಂಭಿಸಿದೆ.
ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರಿಗೆ ಕನಿಷ್ಠ ಎರಡು ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ ವಹಿಸಿ, ಚುನಾವಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗುವಂತೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಪಕ್ಷದ ಅತ್ಯುನ್ನತ ಮೂಲಗಳು ತಿಳಿಸಿವೆ.

           ನೂತನ ಸಚಿವರು ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಳ್ಳುವ ಭರವಸೆ ನೀಡಿದ ನಂತರವೇ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರ ಜೊತೆಗೆ ಪ್ರಾದೇಶಿಕ ಪ್ರಾತಿನಿಧ್ಯ, ಜಾತಿ ಸಮೀಕರಣದಂತಹ ಪ್ರಮುಖ ರಾಜಕೀಯ ಅಂಶಗಳನ್ನು ಸಹ ಆಧರಿಸಿ ಸಂಪುಟ ಪುನಾರಚನೆ ಮಾಡಲಾಗಿದ್ದು, ಒಟ್ಟಾರೆ ಗುರಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹೆಚ್ಚು ಸ್ಥಾನಗಳನ್ನು ದೊರಕಿಸಿಕೊಡುವುದೇ ಆಗಿದೆ.

              ಲೋಕಸಭೆ ಚುನಾವಣೆ ಉದ್ದೇಶದಿಂದಲೇ ಜೆಡಿಎಸ್ ಪಕ್ಷದ ಸಹಮತಿಯಿಲ್ಲದಿದ್ದರೂ ಸಂಪುಟ ಪುನಾರಚನೆ ಮಾಡಲೇಬೇಕೆಂದು ಸಿದ್ದರಾಮಯ್ಯ, ಪಟ್ಟು ಹಿಡಿದು ಯಶಸ್ವಿಯಾದರು. ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಪಕ್ಷದ ಬಲವೃದ್ಧಿಸಿದ್ದು, ಇದೇ ಉತ್ಸಾಹದಲ್ಲಿ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನುಮತಿ ನೀಡಿದರು ಎಂದು ತಿಳಿದುಬಂದಿದೆ.

           ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಎರಡು ಕ್ಷೇತ್ರಗಳಲ್ಲಿ ಆರ್ಥಿಕ ಸಂಪನ್ಮೂಲ ಒದಗಿಸುವುದು ಸೇರಿದಂತೆ ಎಲ್ಲಾ ಉಸ್ತುವಾರಿ ನೋಡಿಕೊಳ್ಳಬೇಕೆಂದು ಸಿದ್ದರಾಮಯ್ಯ ನೂತನ ಸಚಿವರಿಗೆ ಸೂಚಿಸಿದ್ದಾರೆ.

           ಸಚಿವ ಸತೀಶ್ ಜಾರಕಿಹೊಳಿಗೆ ಬೆಳಗಾವಿ ಮತ್ತು ಚಿಕ್ಕೋಡಿ, ಎಂ.ಬಿ.ಪಾಟೀಲ್ ಅವರಿಗೆ ವಿಜಯಪುರ ಹಾಗೂ ಬಾಗಲಕೋಟೆ, ಎಂಟಿಬಿ ನಾಗರಾಜ್ ಅವರಿಗೆ, ಚಿಕ್ಕಬಳ್ಳಾಪುರ, ಕೋಲಾರ ಉಸ್ತುವಾರಿ ನೀಡಲಾಗಿದೆ. ರಹೀಮ್ ಖಾನ್ ಅವರಿಗೆ ಮುಸ್ಲಿಂ ಬಾಹುಳ್ಯವುಳ್ಳ ಬೀದರ್ ಹಾಗೂ ಸಂಸದ ಮಲ್ಲಿಕಾರ್ಜುನ ಖರ್ಗೆ ಪ್ರತಿನಿಧಿಸುವ ಗುಲ್ಬರ್ಗ ಕ್ಷೇತ್ರಗಳ ಉಸ್ತುವಾರಿ ವಹಿಸಲಾಗಿದೆ.

           ಬಳ್ಳಾರಿಯಲ್ಲಿ ತಮ್ಮ ಆಪ್ತ ವಿ.ಎಸ್.ಉಗ್ರಪ್ಪ ಅವರನ್ನು ಮತ್ತೊಮ್ಮೆ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ನೂತನ ಸಚಿವರಾದ ಪಿ.ಟಿ.ಪರಮೇಶ್ವರ್ ನಾಯಕ್, ತುಕಾರಾಮ್ ಅವರಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link