ಪ್ರಥಮದರ್ಜೆ ಕಾಲೇಜಿಗೆ ಶಾಸಕರ ಭೇಟಿ

ಚಿಕ್ಕನಾಯಕನಹಳ್ಳಿ

        ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿ ನಿರ್ಮಾಣದ ಹಂತದಲ್ಲಿ ತಳಪಾಯವಿಲ್ಲದೆ ಕಾಮಗಾರಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಹಾಗೂ ಕಾಲೇಜಿನ ಸಿಬ್ಬಂದಿ ಶಾಸಕರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಶಾಸಕ ಜೆ.ಸಿಮಾಧುಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದರು.

          ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿ ನಿರ್ಮಾಣದ ಹಂತದಲ್ಲಿ ಅವೈಜ್ಞಾನಿಕವಾಗಿ ತಳಪಾಯವಿಲ್ಲದೆ ಗುತ್ತಿಗೆದಾರರು ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ ಎಂಬ ದೂರಿನ ಮೇರೆಗೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಜೆ.ಸಿ.ಮಾಧುಸ್ವಾಮಿ ಕಟ್ಟಡ ನಿರ್ಮಾಣದ ನಕ್ಷೆ ಹಾಗೂ ನಿರ್ಮಿಸುತ್ತಿರುವ ಗುತ್ತಿಗೆದಾರರಾದ ರೈಟ್ಸ್ ಕಂಪನಿಯ ಇಂಜಿನಿಯರ್‍ರವರನ್ನು ಸ್ಥಳಕ್ಕೆ ಕರೆಸಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ, ನಿಯಮದ ಪ್ರಕಾರ ಕಾಮಗಾರಿ ನಡೆಸುವಂತೆ ಸೂಚಿಸಿದರು.

        ಕಾಲೇಜಿನ ಸಿಬ್ಬಂದಿಗೆ ಕಟ್ಟಡದ ಕ್ಯೂರಿಂಗ್ ಬಗ್ಗೆ ಹಾಗೂ ಗುಣಮಟ್ಟದ ಕಾಮಗಾರಿಯ ಬಗ್ಗೆ ಗಮನಹರಿಸುವಂತೆ ಹೇಳಿದ ಅವರು ಪ್ರತಿ ದಿನ ಕಾಮಗಾರಿ ವೀಕ್ಷಿಸುವಂತೆ ಸೂಚಿಸಿದರು.ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸೋಮಶೇಖರ್, ಪ್ರಾಂಶುಪಾಲ ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link