ಬೆಂಗಳೂರು
ಚಿತ್ರ ನಿರ್ಮಾಣ ಮತ್ತು ರಿಯಲ್ ಎಸ್ಟೇಟ್ ನಲ್ಲಿ ಹಣ ಹೂಡಿಕೆ ಮಾಡುವುದಾಗಿ ಹೇಳಿ ನಂಬಿಸಿ, 85ಲಕ್ಷ ರೂ. ವಂಚಿಸಿದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ಚಿತ್ರ ನಿರ್ದೇಶಕ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕೆ. ಸುಧಾಕರ್ ಮತ್ತು ಇಬ್ಬರು ಸಹಚರರಾದ ನಲ್ಲಯನ್ ಪೀಟರ್ ಮತ್ತು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ ಎಂಬುದಾಗಿ ಪೊಲೀಸರು ಹೇಳಿದ್ದಾರೆ.
ಚಿತ್ರ ನಿರ್ಮಾಣ ಮತ್ತು ರಿಯಲ್ ಎಸ್ಟೇಟ್ ವಲಯದಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಿಕೊಡುವುದಾಗಿ ಹೇಳಿ ಕೆ.ಟಿ.ದಿವ್ಯಾ ಎಂಬ ಮಹಿಳೆಯಿಂದ 85 ಲಕ್ಷ ರೂ. ಹಣ ಪಡೆದು ನಂತರ ಆಕೆಗೆ ವಂಚನೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.ಈ ಕುರಿತು ದಿವ್ಯಾ ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಮೂವರನ್ನು ಬಂಧಿಸಲಾಗಿದೆ.
ನಟ ರಜನಿಕಾಂತ್ ಚಿತ್ರ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವುದಾಗಿ ಹೇಳಿ, ಜೊತೆಗೆ ರಿಯಲ್ ಎಸ್ಟೇಟ್, ಜಿಆರ್‍ಎಸ್ ಫ್ಯಾಂಟಸಿ ಪಾರ್ಕ್ ಸೇರಿದಂತೆ ಹಲವು ಕಡೆ ಹೂಡಿಕೆ ಮಾಡುವುದಾಗಿ ನಂಬಿಸಿದ್ದರು ಎಂದು ದಿವ್ಯಾ ದೂರು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








