ಬಳ್ಳಾರಿ
ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅಡಿ ನಿಗದಿಪಡಿಸಿದ ಅನುದಾನವನ್ನು ನಿಗದಿಪಡಿಸಿದ ಅವಧಿಯೊಳಗೆ ಖರ್ಚು ಮಾಡದಿದ್ದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಮೇಲೆ ಎಸ್ಸಿಪಿ/ಟಿಎಸ್ಪಿ ಕಾಯ್ದೆ ಅನುಸಾರ ಕೇಸ್ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಎಸ್ಸಿಪಿ/ಟಿಎಸ್ಪಿ ಯೋಜನೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಯ ಮಾಹಿತಿ ನೀಡದವರಿಗೆ ಮತ್ತು ಸಭೆಗೆ ಗೈರುಹಾಜರಾದವರಿಗೆ ನೋಟಿಸ್ ಜಾರಿಗೊಳಿಸುವಂತೆ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ ರಾಮ್ ಪ್ರಸಾತ್ ಮನೋಹರ್ ಅವರು ಕೂಡಲೇ ಎಲ್ಲ ಇಲಾಖೆ ಅಧಿಕಾರಿಗಳು ನಿಗದಿಪಡಿಸಿದ ಅವಧಿಯೊಳಗೆ ಅನುದಾನ ಖರ್ಚು ಮಾಡಿ ಪ್ರಗತಿ ವರದಿ ಸಲ್ಲಿಸಬೇಕು ಎಂದರು.
ಫಲಾನುಭವಿ ಆಧಾರಿತ ಯೋಜನಾ ಕಾರ್ಯಕ್ರಮಗಳನ್ನು ಜ.15ರೊಳಗೆ ಪೂರ್ಣಗೊಳಿಸಿ ವರದಿ ನೀಡುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಎಸ್ಸಿಪಿ/ಟಿಎಸ್ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಖರ್ಚು ಮಾಡಬೇಕು. ಅನುದಾನ ಲ್ಯಾಪ್ಸ್ ಆಗದೇ ಮತ್ತು ಬೇರೆಡೆ ಹೋದರೇ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.ಪಂಚಾಯತ್ರಾಜ್ ಎಂಜನಿಯರಿಂಗ್, ಪ್ರವಾಸೋದ್ಯಮ,ಕೃಷಿ,ಕೈಗಾರಿಕೆ, ಯುವಜನ ಸಬಲೀಕರಣ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಚರ್ಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
