ಪುಲ್ವಾಮ:

ಕಾಶ್ಮೀರದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಅವಂತಿಪೊರಾದಲ್ಲಿ ಇಂದು ಮುಂಜಾನೆ ಭಾರತೀಯ ಸೇನೆ ಎನ್’ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿ ದಾಳಿ ಆರಂಭಿಸಿ ಒಬ್ಬನನ್ನು ಹೊಡೆದುರುಳಿಸಿದೆ. ದಾಳಿಯ ವೇಳೆ ಉಗ್ರರು ಏಕಾಏಕಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಗಳು ಬಂದಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
